‘ಮಮ್ಮಿ-ಪಪ್ಪಾ, ನಾನು ಜೆಇಇ ಬರೆಯಲಾರೆ’; ಪತ್ರ ಬರೆದಿಟ್ಟು ಯುವತಿ ಆತ್ಮಹತ್ಯೆ

Date:

ನನಗೆ ಜೆಇಇ ಪರೀಕ್ಷೆ ಬರೆಯಲು ಆಗುತ್ತಿಲ್ಲ ಎಂದು ಪತ್ರ ಬರೆದಿಟ್ಟು 18 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.

ನಿಹಾರಿಕಾ ಸೋಲಂಕಿ ಎಂಬ ಯುವತಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನವರಿ 31ರಂದು ನಿಗದಿಯಾಗಿದ್ದ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ಆಕೆ ಸಿದ್ದತೆ ನಡೆಸುತ್ತಿದ್ದರು. ಆದರೆ, ಪರೀಕ್ಷೆ ಬರೆಯಲು ಆಗುವುದಿಲ್ಲ ಎಂದು ಆಕೆ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ ಎಂದು ಕೋಟಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಧರಂವೀರ್ ಸಿಂಗ್ ಹೇಳಿದ್ದಾರೆ.

“ಮಮ್ಮಿ ಪಪ್ಪಾ, ನಾನು ಜೆಇಇ ಬರೆಯಲು ಸಾಧ್ಯವಿಲ್ಲ. ಆದ್ದರಿಂದ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಸೋತಿದ್ದೇನೆ. ನಾನು ಕೆಟ್ಟ ಮಗಳು. ಕ್ಷಮಿಸಿ ಮಮ್ಮಿ ಪಪ್ಪಾ. ಇದು ಕೊನೆಯ ಆಯ್ಕೆ,” ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ತಂದೆ ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಮೂವರು ಹೆಣ್ಣು ಮಕ್ಕಳಲ್ಲಿ ನಿಹಾರಿಕಾ ಹಿರಿಯ ಮಗಳು. ಆಕೆ ಸಾವನ್ನಪ್ಪಿದಾಗ ಆಕೆಯ ತಂದೆ ಕೆಲಸಕ್ಕೆ ತೆರಳಿದ್ದರು. ಆಕೆಯ ತಾಯಿ ಮತ್ತು ಸೋದರಿಯರು ಅಜ್ಜಿಯ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಾಗ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಆಕೆಗೆ ಆಕೆಯ ತಾಯಿ ಕರೆ ಮಾಡಿದ್ದಾರೆ. ಆದರೆ, ಆಕೆ ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಮನೆಗೆ ತೆರಳಿ ನೋಡಿದಾಗ, ಒಳಗಿನಿಂದ ಬಾಗಿಲು ‘ಲಾಕ್‌’ ಆಗಿತ್ತು. ಕಿಟಕಿಯಿಂದ ನೋಡಿದಾಗ, ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

“ನಿಹಾರಿಕಾ ತನ್ನ ಹೆಚ್ಚಿನ ಸಮಯವನ್ನು – ಪ್ರತಿದಿನ ಸುಮಾರು 8-9 ಗಂಟೆಗಳ ಕಾಲ – ಓದಿನಲ್ಲಿ ಕಳೆಯುತ್ತಿದ್ದಳು. ಅದರಲ್ಲಿ, ಸುಮಾರು ಆರು ಗಂಟೆಗಳ ಆಕೆ ತರಬೇತಿಗೆ ತೆರಳುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕೋಟಾದಲ್ಲಿ ಈ ವರ್ಷ ನಡೆದ ಎರಡನೇ ಆತ್ಮಹತ್ಯೆ ಇದು. ಕಳೆದ ವಾರ ಉತ್ತರ ಪ್ರದೇಶದ ಮೊರಾದಾಬಾದ್ ನಿವಾಸಿಯೊಬ್ಬರು ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೂ ಕೂಡ ಜೆಇಇಗೆ ತಯಾರಿ ನಡೆಸುತ್ತಿದ್ದರು. ಕಳೆದ ವರ್ಷ ನಗರದಲ್ಲಿ ಸುಮಾರು 30 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೂರು ದಿನಗಳ ಹಿಂದೆಯಷ್ಟೇ ಕೋಟಾ ಜಿಲ್ಲಾಧಿಕಾರಿ ಡಾ.ರವೀಂದ್ರ ಗೋಸ್ವಾಮಿ ಅವರು ‘ಕಾಮ್ಯಾಬ್ ಕೋಟಾ’ ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ್ದರು. ಆ ಯೋಜನೆ ಅಡಿಯಲ್ಲಿ ಅವರು ಪ್ರತಿ ಶುಕ್ರವಾರ ನಗರದ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡು ಕೋಚಿಂಗ್ ಪಡೆಯುತ್ತಿರುವ ವಿದ್ಯಾರ್ಥಿಗಳೊಂದಿಗೆ ಭೋಜನ ಮಾಡುವುದರ ಜೊತೆಗೆ, ಜೆಇಇ ಮತ್ತು ನೀಟ್‌ ಆಕಾಂಕ್ಷಿಗಳು ಎದುರಿಸಬಹುದಾದ ಸಮಸ್ಯೆಗಳ ಕುರಿತು ಚರ್ಚಿಸುವುದು ಅವರ ಯೋಜನೆ ಉದ್ದೇಶವಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...