1,000 ಕೋಟಿ ರೂ. ಅಕ್ರಮ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಕೆಟ್ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಇಬ್ಬರ ಒಡೆತನದಲ್ಲಿರುವ ಸುಮಾರು 11.14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಇಡಿ ಹೇಳಿದೆ.
“2002ರ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರ ಚರಾಸ್ತಿ ಮತ್ತು ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ” ಎಂದು ಇಡಿ ಪ್ರಧಾನ ಕಚೇರಿ ತಿಳಿಸಿದೆ.
ರೈನಾ ಹೆಸರಿನಲ್ಲಿದ್ದ 6.64 ಕೋಟಿ ರೂ. ಮೌಲ್ಯದ ಮ್ಯೂಚುವಲ್ ಫಂಡ್ ಹೂಡಿಕೆಗಳು ಮತ್ತು ಧವನ್ ಹೆಸರಿನಲ್ಲಿದ್ದ 4.5 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




