ಜುಲೈ 20 ರಿಂದ ಮುಂಗಾರು ಅಧಿವೇಶನ | ಏಕರೂಪ ನಾಗರಿಕ ಸಂಹಿತೆ ಸೇರಿ ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ

Date:

  • 23 ದಿನ ನಡೆಯಲಿರುವ ಉಭಯ ಸದನಗಳ ಮುಂಗಾರು ಅಧಿವೇಶನ
  • ಕೆಲವು ದಿನಗಳ ನಂತರ ಹೊಸ ಸಂಸತ್ತು ಭವನಕ್ಕೆ ಅಧಿವೇಶನ ಸ್ಥಳಾಂತರ

ಇದೇ ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್‌ 11 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಶನಿವಾರ (ಜುಲೈ 1) ಹೇಳಿದ್ದಾರೆ.

ಸಂಸತ್ತಿನ ಉಭಯ ಸದನಗಳಲ್ಲಿ ಗುಣಮಟ್ಟದ ಚರ್ಚೆಗೆ ಎಲ್ಲ ಪಕ್ಷಗಳು ಕೊಡುಗೆ ನೀಡುವಂತೆ ಪ್ರಲ್ಹಾದ್ ಜೋಶಿ ಅವರು ಒತ್ತಾಯಿಸಿದ್ದಾರೆ.

ಹೊಸ ಸಂಸತ್ತಿನ ಕಟ್ಟಡದ ಉಭಯ ಸದನಗಳಾದ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಈ ಬಾರಿಯ ಮುಂಗಾರು ಅಧಿವೇಶನ ಜರುಗಲಿದ್ದು ಪ್ರಮುಖ ವಿಷಯಗಳು ಚರ್ಚೆಯಾಗಲಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಈ ಕುರಿತು ಟ್ವೀಟ್‌ ಮಾಡಿದ್ದು, “ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20ರಿಂದ ಪ್ರಾರಂಭವಾಗಿ ಆಗಸ್ಟ್ 11ರವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತು ಗುಣಮಟ್ಟದ ಚರ್ಚೆಗಳಿಗೆ ಕೊಡುಗೆ ನೀಡಲು ಎಲ್ಲ ಪಕ್ಷಗಳನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

ಮುಂಗಾರು ಅಧಿವೇಶನ ಒಟ್ಟು 23 ದಿನಗಳ ಕಾಲ ನಡೆಯಲಿದ್ದು 17 ಕಲಾಪಗಳು ಇರಲಿವೆ ಎಂದು ಪ್ರಲ್ಹಾದ್ ಜೋಶಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಹಳೆಯ ಸಂಸತ್ತು ಭವನದ ಕಟ್ಟಡದಲ್ಲಿ ಅಧಿವೇಶನ ಆರಂಭವಾಗುತ್ತದೆ. ಕೆಲವು ದಿನಗಳ ನಂತರ ಕಲಾಪವು ನೂತನ ಸಂಸತ್ತು ಭವನದ ಕಟ್ಟಡಕ್ಕೆ ಸ್ಥಳಾಂತರವಾಗುತ್ತದೆ ಎಂದು ಸಂಸದೀಯ ಮೂಲಗಳು ಹೇಳಿವೆ.

ನೂತನ ಸಂಸತ್ತು ಭವನ ಉದ್ಘಾಟನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಂಸತ್ತಿನ ಅಧಿವೇಶನದ ಕಲಾಪಗಳು ಇಲ್ಲಿ ನಡೆಯಲಿವೆ. ಈ ಹಿನ್ನೆಲೆ ಈ ಬಾರಿ ಅಧಿವೇಶನವು ವಿಶೇಷವಾಗಿದೆ ಎನ್ನಲಾಗಿದೆ. ಕಳೆದ ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ತು ಭವನವನ್ನು ಉದ್ಘಾಟಿಸಿದ್ದರು.

ನೂತನ ಸಂಸತ್ತು ಭವನ ಕಟ್ಟಡದಲ್ಲಿ ಬಹುತೇಕ ಎಲ್ಲ ರಾಜಕೀಯ ಪಕ್ಷಗಳಿಗೆ ಕಚೇರಿಗಳನ್ನು ಗುರುತಿಸಲಾಗಿದೆ. ಅಲ್ಲದೆ ಹಳೆಯ ಸಂಸತ್ತು ಕಟ್ಟಡದಿಂದ ಪ್ರಮುಖ ಇಲಾಖೆಗಳನ್ನು ಹೊಸ ಸಂಸತ್ತು ಭವನಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ.

ಮುಂಗಾರು ಅಧಿವೇಶನದ ಕಲಾಪಗಳಲ್ಲಿ ಈ ಬಾರಿ ಏಕರೂಪದ ನಾಗರಿಕ ಸಂಹಿತೆಯು ಭಾರೀ ಚರ್ಚೆಗೆ ಒಳಪಡಲಿದೆ ಎನ್ನಲಾಗಿದೆ.

ಅಧಿವೇಶನದಲ್ಲಿ, ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಸುಗ್ರೀವಾಜ್ಞೆಗೆ ಬದಲಿಯಾಗಿ ಕೇಂದ್ರ ಸರ್ಕಾರ ಮಸೂದೆಯನ್ನು ತರುವ ಸಾಧ್ಯತೆಯಿದೆ. ಸುಗ್ರೀವಾಜ್ಞೆಯು ಸುಪ್ರೀಂ ಕೋರ್ಟ್ ತೀರ್ಪನ್ನು ಪರಿಣಾಮಕಾರಿಯಾಗಿ ರದ್ದುಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ದೆಹಲಿ ಸುಗ್ರಿವಾಜ್ಞೆ: ಕೇಂದ್ರದ ವಿರುದ್ಧ ಸುಪ್ರೀಂನಲ್ಲಿ ಪ್ರಶ್ನಿಸಲು ಮುಂದಾದ ಎಎಪಿ ಸರ್ಕಾರ

ದೆಹಲಿ ಸರ್ಕಾರಕ್ಕೆ ಆಡಳಿತ ಸೇವೆಗಳ ವಿಷಯಗಳ ಮೇಲೆ ಹೆಚ್ಚಿನ ಶಾಸಕಾಂಗ ಮತ್ತು ಆಡಳಿತಾತ್ಮಕ ನಿಯಂತ್ರಣವನ್ನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು.

ಮುಂಗಾರು ಅಧಿವೇಶನ ಮಣಿಪುರದಲ್ಲಿನ ಪ್ರಕ್ಷುಬ್ಧ ವಾತಾವರಣ ಕೂಡಾ ಪ್ರತಿಪಕ್ಷಗಳಿಗೆ ಚರ್ಚೆಯ ವಿಷಯವಾಗುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...