ಪೋಸ್ಟರ್‌ ವಿವಾದದ ನಂತರ ಸಸ್ಯಾಹಾರಿಗಳಿಗೆ ಪ್ರತ್ಯೇಕ ಸ್ಥಳ ಮೀಸಲಿಟ್ಟ ಬಾಂಬೆ ಐಐಟಿ: ಮತ್ತೊಂದು ವಿವಾದ

Date:

ಕಳೆದ ಜುಲೈನಲ್ಲಿ ಬಾಂಬೆ ಐಐಟಿಯ ಕ್ಯಾಂಟೀನ್‌ನ ಕೆಲವು ಸ್ಥಳದಲ್ಲಿ ಸಸ್ಯಾಹಾರಿಗಳಿಗೆ ಮಾತ್ರ ಪೋಸ್ಟರ್ ವಿವಾದಕ್ಕೆ ಈಡಾಗಿತ್ತು. ಈಗ ಎರಡು ತಿಂಗಳ ನಂತರ ಬಾಂಬೆ ಐಐಟಿ ಕ್ಯಾಂಟಿನ್ ಸಿಬ್ಬಂದಿಯು ಮೆಸ್‌ನಲ್ಲಿ ಸಸ್ಯಾಹಾರಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಥಳವನ್ನು ಮೀಸಲಿಟ್ಟಿರುವುದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಸಂಸ್ಥೆಯ ಅಡುಗೆ ನಿರ್ವಹಣಾ ವಿಭಾಗ ಸಾಮಾನ್ಯ ಕ್ಯಾಂಟೀನ್‌ನಲ್ಲಿ ‘ಸಸ್ಯಾಹಾರ‘ ತಿನ್ನುವವರಿಗೆ ಆರು ಟೇಬಲ್‌ಗಳನ್ನು ನಿಗದಿಪಡಿಸಿದೆ. ಅಡುಗೆ ನಿರ್ವಹಣಾ ವಿಭಾಗವು ಸಸ್ಯಾಹಾರಕ್ಕೆ ಪ್ರತ್ಯೇಕ ಜಾಗ ಮೀಸಲಿಟ್ಟಿರುವ ಬಗ್ಗೆ ಐಐಟಿ ಸಂಸ್ಥೆಗಳಲ್ಲಿ ದಲಿತ ಹಾಗೂ ಶೋಷಿತ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿ ಸಂಘಟನೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್(ಎಪಿಪಿಎಸ್‌ಸಿ) ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದೆ.

ಇಮೇಲ್‌ನಲ್ಲಿ ಇರುವ ಮಾಹಿತಿ ಪ್ರಕಾರ, ಎಚ್‌-12, 13 ಮತ್ತು 14 ರ ಎಲ್ಲ ಮೂರು ಹಾಸ್ಟೆಲ್ ವಾರ್ಡನ್‌ಗಳು ಮತ್ತು ಕೌನ್ಸಿಲ್ ಸದಸ್ಯರೊಂದಿಗೆ ಇತ್ತೀಚಿನ ಸಭೆಯ ನಂತರ, ನಾವು ನಮ್ಮ ಮೆಸ್ ಸೌಲಭ್ಯಗಳ ಕುರಿತು ಪ್ರಮುಖವಾದ ನವೀಕರಣವನ್ನು ಹಂಚಿಕೊಳ್ಳಲು ಬಯಸಿದ್ದೇವೆ. ಎಲ್ಲರಿಗೂ ಆರಾಮದಾಯಕ ಊಟ ನೀಡುವುದು ನಮ್ಮ ಮೆಸ್‌ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಊಟದ ಸಮಯದಲ್ಲಿ ಮಾಂಸಾಹಾರ ಸೇವಿಸದ ಕೆಲವರಿದ್ದಾರೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ಮೆಸ್‌ನಲ್ಲಿ 6 ಟೇಬಲ್‌ಗಳನ್ನು ಗೊತ್ತುಪಡಿಸುವುದು ಅವಶ್ಯಕವಾಗಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಬೈ | ಐಐಟಿ ಸಂಸ್ಥೆಯ ಕ್ಯಾಂಟೀನ್‌ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್

ಆ ಸ್ಥಳದಲ್ಲಿ ಯಾರು ಬೇಕಾದರೂ ಸಸ್ಯಾಹಾರವನ್ನು ಮಾತ್ರ ಸೇವಿಸಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯು ಆರಾಮದಾಯಕ ಮತ್ತು ಆಹ್ಲಾದಕರ ಭೋಜನದ ಅನುಭವವನ್ನು ಆನಂದಿಸುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಪ್ರಾಥಮಿಕ ಗುರಿಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿಯೆ ಆರು ಟೇಬಲ್‌ಗಳನ್ನು ಮಾತ್ರ ಗೊತ್ತುಪಡಿಸಲು ನಿರ್ಧರಿಸಲಾಗಿದೆ. ಪ್ರತಿಯೊಬ್ಬರೂ ಶಾಂತಿಯುತ ವಾತಾವರಣದಲ್ಲಿ ತಮ್ಮ ಊಟವನ್ನು ಆನಂದಿಸಲು ಈ ಉಪಕ್ರಮವನ್ನು ಬೆಂಬಲಿಸಲು ನಾವು ಎಲ್ಲ ವಿದ್ಯಾರ್ಥಿಗಳನ್ನು ವಿನಂತಿಸುತ್ತೇವೆ ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ.

ಈ ವರ್ಷದ ಜುಲೈನಲ್ಲಿ ಬಾಂಬೆ ಐಐಟಿ ಸಂಸ್ಥೆಯಲ್ಲಿ ‘ಸಸ್ಯಾಹಾರಿ ಮಾತ್ರ’ ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತ್ತು. ಹಾಸ್ಟೆಲ್‌ನ ಪ್ರಧಾನ ಕಾರ್ಯದರ್ಶಿಗೆ ಆರ್‌ಟಿಐಗಳು ಇಮೇಲ್‌ ಮೂಲಕ ಸಂಸ್ಥೆಯಲ್ಲಿ ಆಹಾರ ಪ್ರತ್ಯೇಕತೆಗೆ ಯಾವುದೇ ನೀತಿಯಿಲ್ಲ ಎಂದು ಬಹಿರಂಗಪಡಿಸಿದ್ದರೂ, ಕೆಲವರು ಮಾಂಸಾಹಾರ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಲು ಹಾಗೂ ‘ಸಸ್ಯಾಹಾರಿಗಳು ಮಾತ್ರ’ ಎಂಬ ನಾಮಫಲಕ ಅಂಟಿಸಿ ತಾರತಮ್ಯ ಮನಸ್ಥಿತಿ ಪ್ರದರ್ಶಿಸಿದ್ದಾರೆ” ಎಂದು ಎಪಿಪಿಎಸ್‌ಸಿ ಖಂಡಿಸಿತ್ತು.

ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ನಂತರ ಪೋಸ್ಟರ್ “ಅನಧಿಕೃತ” ಎಂದು ನಿರ್ವಾಹಕರು ಹೇಳಿದ್ದರು. ಇಂತಹ ಘಟನೆ ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಈಗ ಸಂಸ್ಥೆಯೆ ಖುದ್ದಾಗಿ ಸಸ್ಯಾಹಾರಿಗಳಿಗೆ ಪ್ರತ್ಯೇಕ ಸ್ಥಳ ಮೀಸಲಿಟ್ಟಿರುವ ಸಂಸ್ಥೆಯ ಕ್ರಮವನ್ನು ಎಪಿಪಿಎಸ್‌ಸಿ ಪ್ರತಿಗಾಮಿ ಎಂದು ವಿರೋಧ ವ್ಯಕ್ತಪಡಿಸಿದೆ. ಸಂಸ್ಥೆಯು ಅಂತಿಮವಾಗಿ ಆಹಾರ ಕ್ರಮದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿ ವ್ಯವಸ್ಥೆಯಲ್ಲಿ ಭೇದಭಾವ ನೀತಿಯ ಪರವಾಗಿರುವುದನ್ನು ಬಹಿರಂಗಗೊಳಿಸಿದೆ ಎಂದು ಖಂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...