2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಹೆಚ್ಚು ದೂರುಗಳು ದಾಖಲು

Date:

2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಹೆಚ್ಚು ದೂರುಗಳು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಗೆ ಬಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಶುಕ್ರವಾರ, ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, “2016 ಮತ್ತು 2025ರ ನಡುವೆ ಹಾಲಿ ನ್ಯಾಯಾಧೀಶರ ವಿರುದ್ಧ 8,639 ದೂರುಗಳು ಬಂದಿವೆ. ಈ ಪೈಕಿ, 2024ರಲ್ಲಿಯೇ ಹಾಲಿ ನ್ಯಾಯಾಧೀಶರ ವಿರುದ್ಧ ಸಿಜೆಐ ಕಚೇರಿಗೆ 1,170 ದೂರುಗಳು ಬಂದಿವೆ” ಎಂದು ಹೇಳಿದ್ದಾರೆ.

ಹೈಕೋರ್ಟ್‌ಗಳ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಬಂದ ದೂರುಗಳನ್ನು ನ್ಯಾಯಾಂಗವು ‘ಆಂತರಿಕ ಕಾರ್ಯವಿಧಾನ’ದ ಮೂಲಕ ನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1997ರ ಮೇ ತಿಂಗಳಿನಲ್ಲಿ, ಸುಪ್ರೀಂ ಕೋರ್ಟ್ ಎರಡು ನಿರ್ಣಯಗಳನ್ನು ಅಂಗೀಕರಿಸಿತು – 1. ‘ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ’; ಇದು ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಾಧೀಶರು ಗಮನಿಸಬೇಕಾದ ಮತ್ತು ಅನುಸರಿಸಬೇಕಾದ ಕೆಲವು ನ್ಯಾಯಾಂಗ ಮಾನದಂಡಗಳು ಮತ್ತು ತತ್ವಗಳನ್ನು ನಿಗದಿಪಡಿಸುತ್ತದೆ. 2. ‘ಇನ್-ಹೌಸ್ ಪ್ರೊಸೀಜರ್’; ಇದು ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ ಸೇರಿದಂತೆ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟ ಮೌಲ್ಯಗಳನ್ನು ಅನುಸರಿಸದ ನ್ಯಾಯಾಧೀಶರ ವಿರುದ್ಧ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತದೆ.

ಈ ನಿರ್ಣಯಗಳ ಅಡಿಯಲ್ಲಿ ಸಿಜೆಐ ಅವರು ಎಸ್‌ಸಿ ನ್ಯಾಯಾಧೀಶರು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ದೂರುಗಳನ್ನು ಸ್ವೀಕರಿಸಬಹುದು. ಅದೇ ರೀತಿ, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹೈಕೋರ್ಟ್ ನ್ಯಾಯಾಧೀಶರ ನಡವಳಿಕೆಯ ವಿರುದ್ಧ ದೂರುಗಳನ್ನು ಸ್ವೀಕರಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...