ಎಎಪಿಯ 7 ಕೋಟಿ ವಿದೇಶಿ ನೆರವಿನ ಬಗ್ಗೆ ಎಫ್‌ಸಿಆರ್‌ಎ ತನಿಖೆಗೆ ಇ.ಡಿ ಮನವಿ: ಮತ್ತೊಂದು ಪಿತೂರಿಯೆಂದ ಪಕ್ಷ

Date:

ದೆಹಲಿ ಹಾಗೂ ಪಂಜಾಬ್‌ ಎಎಪಿ ಸರ್ಕಾರಗಳು ವಿದೇಶಿ ನೆರವು ನಿಯಂತ್ರಣ ಕಾಯ್ದೆಯನ್ನು(ಎಫ್‌ಆರ್‌ಸಿಎ) ಉಲ್ಲಂಘಿಸಿ ವಿದೇಶಗಳಿಂದ 7 ಕೋಟಿ ರೂ.ಗೂ ಹೆಚ್ಚು ನೆರವು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯವು ಎಫ್‌ಆರ್‌ಸಿಎ ತನಿಖೆ ನಡೆಸಬೇಕೆಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದೆ.

ಪಂಜಾಬ್‌ ಮಾಜಿ ಎಎಪಿ ಶಾಸಕ ಸುಖಪಾಲ್‌ ಸಿಂಗ್‌ ಖೈರಾ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಮದಕ ದ್ರವ್ಯ ಸಂಪರ್ಕ ಹೊಂದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಕೆಲವು ದಾಖಲೆಗಳು ಹಾಗೂ ಇಮೇಲ್‌ಗಳನ್ನು ವಶಪಡಿಸಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿರಂತೆ ಸುಖಪಾಲ್‌ ಸಿಂಗ್‌ ಖೈರಾ ಅವರನ್ನು ಜಾರಿ ನಿರ್ದೇಶನಾಲಯವು 2021ರಲ್ಲಿ ಬಂಧಿಸಿತು. ಸದ್ಯ ಸುಖಪಾಲ್‌ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಖಲೆಯಲ್ಲಿರುವ ಮಾಹಿತಿಯಂತೆ ಎಎಪಿಯು ಎಫ್‌ಆರ್‌ಸಿಎ ಮತ್ತು ಜನಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಇ.ಡಿ ಕಳೆದ ವರ್ಷದ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಇ.ಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಹೊಸ ದಾಖಲೆಗಳನ್ನು ಹಂಚಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಆಟ, ಹುಚ್ಚಾಟ, ಜೂಜಾಟ ಮತ್ತು ಧೋನಿಯ ದುಗುಡ

ಎಎಪಿ ವಿದೇಶಗಳಿಂದ ಇಲ್ಲಿಯವರೆಗೂ 7 ಕೋಟಿಗೂ ಹೆಚ್ಚು ನೆರವು ಪಡೆದಿದ್ದು, ದಾನಿಗಳ ಹೆಸರು ಹಾಗೂ ಇತರ ವಿವರಗಳನ್ನು ತಪ್ಪಾಗಿ ಘೋಷಿಸಲಾಗಿದೆ ಹಾಗೂ ತಿರುಚಲಾಗಿದೆ ಎಂದು ಇ.ಡಿ ಆರೋಪಿಸಿದೆ.

ಇ.ಡಿ ಆರೋಪವನ್ನು ಆಧಾರರಹಿತ ಎಂದು ಎಎಪಿ ತಳ್ಳಿಹಾಕಿದ್ದು, ದೆಹಲಿ ಮತ್ತು ಪಂಜಾಬ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಎಪಿಯ ಪ್ರತಿಷ್ಠೆಯನ್ನು ಹಾಳು ಮಾಡಲು ಬಿಜೆಪಿ ಮತ್ತೊಂದು ಸಂಚು ರೂಪಿಸಿದೆ ಎಂದು ಆರೋಪಿಸಿದೆ.

“ಇದು ಆಧಾರರಹಿತ ಆರೋಪಗಳು. ಹಳೆಯ ಪ್ರಕರಣವಾಗಿದ್ದು, ಯಾವುದೇ ಅಕ್ರಮ ನೆರವು ಪಡೆದುಕೊಂಡಿಲ್ಲ ಎಂದು ಸಾಬೀತಾಗಿದೆ.ಪಂಜಾಬ್‌ ಹಾಗೂ ದೆಹಲಿ ಲೋಕಸಭಾ ಚುನಾವಣೆಗಳು ಹತ್ತಿರವಿರುವ ಕಾರಣ ಬಿಜೆಪಿ ಎಎಪಿಯ ವಿರುದ್ಧ ಹೊಸ ಸಂಚನ್ನು ರೂಪಿಸುತ್ತಿದೆ” ಎಂದು ದೆಹಲಿ ಸಚಿವೆ ಅತೀಶಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...