ಮೋದಿ ಸರ್ಕಾರ ಟ್ರಂಪ್ ಕೈಗೊಂಬೆಯಾಗಿದೆ: ಸಚಿವ ಎಂ.ಸಿ ಸುಧಾಕರ್

Date:

ಕೇಂದ್ರ ಸರ್ಕಾರವು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಧಾರವಾಡದಲ್ಲಿ ನಡೆದ ಹೊಸದಾಗಿ ನೇಮಕಗೊಂಡ ಪ್ರಾಂಶುಪಾಲರ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರಂಪ್ ಸೂಚನೆಗಳಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಏಕೆ ನಡೆದುಕೊಳ್ಳುತ್ತಿದೆ ಎಂಬ ಪ್ರಶ್ನೆ ಮಾಡಿದ್ದಾರೆ.

ಇತ್ತೀಚೆಗೆ ಮಂಡನೆಯಾದ ರಾಜ್ಯ ಬಜೆಟ್ ಕುರಿತು ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ದೇವಾಲಯಗಳಿಗೆ ಎಷ್ಟು ಹಣ ಮೀಸಲಿಟ್ಟಿದ್ದರು ಎಂಬುದನ್ನು ವಿವರಿಸಬೇಕು ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದುಳಿದ ವರ್ಗಗಳ ಕಲ್ಯಾಣ ಯೋಜನೆಗಳು ಯಾವುದೇ ಒಂದು ಸಮುದಾಯಕ್ಕೆ ಮಾತ್ರವಲ್ಲ, ಸಮಾಜದ ಎಲ್ಲಾ ವರ್ಗಗಳಿಗೆ ಪ್ರಯೋಜನವಾಗುವಂತೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಕೊಂಡಿದೆ ಎಂದು ಹೇಳಿದರು.

ರಾಜ್ಯದ ಬಜೆಟ್ ಸುಮಾರು ರೂ.5 ಲಕ್ಷ ಕೋಟಿ ಆಗಿದ್ದು, ಇದು ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮಂಡಿಸಿದ ಬಜೆಟ್‌ಗಳಂತೆ ಚುನಾವಣಾ ಆಧಾರಿತ ಬಜೆಟ್ ಅಲ್ಲ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಸಾಲವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ ಎಂದು ಆರೋಪಿಸಿದ ಅವರು, ಕಳೆದ 11 ವರ್ಷಗಳಲ್ಲಿ ರಾಷ್ಟ್ರದ ಸಾಲವು ಸುಮಾರು ರೂ.58 ಲಕ್ಷ ಕೋಟಿಯಿಂದ ರೂ.218 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಹೇಳಿದರು.

ಈ ಎಲ್ಲ ಬೆಳವಣಿಗೆಗಳನ್ನು ಜನತೆ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ತಮ್ಮ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...