ಎಸ್‌ಎಸ್‌ಎ ನಿಧಿಗೆ ತಡೆ; ಉಪವಾಸ ಸತ್ಯಾಗ್ರಹ ಮುಂದುವರಿಸಿದ ಸಂಸದ ಸಸಿಕಾಂತ್ ಸೆಂಥಿಲ್

Date:

ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್‌ಎಸ್‌ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ತಮಿಳುನಾಡಿ ತಿರುವಳ್ಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್, ಎಸ್‌ಎಸ್‌ಎ ಯೋಜನೆಯಡಿ ತಮಿಳುನಾಡಿಗೆ ದೊರೆಯಬೇಕಿದ್ದ 2,152 ಕೋಟಿ ರೂ. ನಿಧಿಯನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವುದನ್ನು ಖಂಡಿಸಿದ್ದಾರೆ. ಶುಕ್ರವಾರದಿಂದ ತಿರುವಳ್ಳೂರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಉಪವಾಸ ಸತ್ಯಾಗ್ರಹದ 2ನೇ ದಿನವಾದ ಶನಿವಾರ ರಾತ್ರಿ ಅವರು ಅಧಿಕ ರಕ್ತದೊತ್ತಡದಿಂದ ತೊಂದರೆ ಅನುಭವಿಸಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಆಸ್ಪತ್ರೆಯಿಂದ ‘ಡಿಸ್ಚಾರ್ಜ್’ ಆಗಿರುವ ಸೆಂಥಿಲ್, ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದ ನಿರ್ಧಾರವು ತಮಿಳುನಾಡಿನ 43 ಲಕ್ಷ ವಿದ್ಯಾರ್ಥಿಗಳು ಮತ್ತು 2.2 ಲಕ್ಷ ಶಿಕ್ಷಕರ ಭವಿಷ್ಯವನ್ನು ಅಭದ್ರಗೊಳಿಸಿದೆ ಎಂದು ಸೆಂಥಿಲ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಕೈಬಿಡುವಂತೆ ಸೆಂಥಿಲ್ ಅವರಿಗೆ ತಮಿಳುನಾಡು ಕಾಂಗ್ಎರಸ್‌ ಅಧ್ಯಕ್ಷ ಕೆ ಸೆಲ್ವಪೆರುಂಥಗೈ ಮನವಿ ಮಾಡಿದ್ದಾರೆ. ಆದರೆ, ಸತ್ಯಾಗ್ರಹವನ್ನು ಕೈಬಿಡಲು ಸೆಂಧಿಲ್ ನಿರಾಕರಿಸಿದ್ದಾರೆ.

“ಶನಿವಾರ ನನಗೆ ಸ್ವಲ್ಪ ರಕ್ತದೊತ್ತಡ ಹೆಚ್ಚಾಗಿತ್ತು. ಅದನ್ನು ನಿಯಂತ್ರಣಕ್ಕೆ ತರಲು ಆಸ್ಪತ್ರೆಗೆ ದಾಖಲಾಗಿದ್ದೆ. ರಕ್ತದೊತ್ತಡದ ಹೊರತಾಗಿಯೂ ನನ್ನ ಆರೋಗ್ಯ ಸ್ಥಿರವಾಗಿದೆ. ನಾನು ಚೆನ್ನಾಗಿದ್ದೇನೆ. ತಮಿಳುನಾಡು ಮತ್ತು ದೇಶದ ಇತರ ಭಾಗಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ದುಃಸ್ಥಿತಿಯನ್ನು ಬೆಳಕಿಗೆ ತರಲು ನಾನು ದೃಢನಿಶ್ಚಯದಿಂದ ಇದ್ದೇನೆ. ಉಪವಾಸ ಸತ್ಯಾಗ್ರಹ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...