ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಬಂಧನ; ಬಡವರ ನೋವು ಕೇಳುವವರಿಲ್ಲ ಎಂದ ಸಂತ್ರಸ್ತೆಯ ಪತಿ

Date:

ಮುಂಬೈ ನ ಬಿಎಂಡಬ್ಲ್ಯು ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಏಕನಾಥ್ ಶಿಂಧೆ ಬಣದ ನಾಯಕ ರಾಜೇಶ್ ಶಾ ಪುತ್ರ ಮಿಹಿರ್ ಶಾನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಿಹಿರ್ ಭಾನುವಾರ (ಜುಲೈ 7) ನಡೆಸಿದ ಅಪಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು.

ಮುಂಬೈನ ವಾರ್ಲೆ ಪ್ರದೇಶದಲ್ಲಿ ಮೀನು ಮಾರಾಟಗಾರರಾದ ದಂಪತಿ ಪ್ರದೀಪ್‌ ನಖ್ವಾ ಹಾಗೂ ಕಾವೇರಿ ನಖ್ವಾ  ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ  ವೇಗವಾಗಿ ಬಂದ ಮಿಹಿರ್ ಶಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದಿದೆ. ಸ್ಕೂಟರ್‌ನಿಂದ ಪ್ರದೀಪ್‌ ನಕ್ವಾ ಅವರು ಕೆಳಗೆ ಬಿದ್ದ ನಂತರ ಕಾವೇರಿ ನಖ್ವಾ ಅವರು ಕಾರಿನಡಿ ಸಿಲುಕಿದ್ದಾರೆ. ಕಾವೇರಿ ಅವರನ್ನು 100 ಮೀಟರ್‌ವರೆಗೂ ಕಾರು ಎಳೆದೊಯ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಬೈ | ಶಿವಸೇನಾ ನಾಯಕನ ಪುತ್ರನಿಂದ ಹಿಟ್ ಆ್ಯಂಡ್ ರನ್: ಮಹಿಳೆಯನ್ನು 100 ಮೀಟರ್ ಎಳೆದೊಯ್ದ ಕಾರು

ಬಿಎಂಡಬ್ಲ್ಯು ಕಾರು ರಾಜೇಶ್ ಶಾ ಹೆಸರಿನಲ್ಲಿ ನೋಂದಣಿಯಾಗಿದ್ದು, ಪೊಲೀಸರು ಈಗಾಗಲೇ ರಾಜೇಶ್ ಶಾ ಹಾಗೂ ಚಾಲಕನನ್ನು ಬಂಧಿಸಿದ್ದಾರೆ.

ಈ ನಡುವೆ ಸುದ್ದಿಗಾರರೊಂದಿಗೆ ದುಃಖವನ್ನು ವ್ಯಕ್ತಪಡಿಸಿದ ಸಂತ್ರಸ್ತೆ ಕಾವೇರಿ ನಖ್ವಾ ಅವರ ಪತಿ ಪ್ರದೀಪ್‌ ನಖ್ವಾ, “ನಾನು ಆತನಿಗೆ ನಿಲ್ಲಿಸು ಎಂದು ಹೇಳಿದರೂ ಆತ ನಿಲ್ಲಿಸದೆ ವೇಗವಾಗಿ ಚಲಾಯಿಸುತ್ತಿದ್ದ. ಮೃತಪಡುವಾಗ ಆಕೆ ತುಂಬ ನೋವನ್ನು ಅನುಭವಿಸರಬೇಕು. ಇದು ಎಲ್ಲರಿಗೂ ಗೊತ್ತಿದ್ದರೂ ಯಾರೂ ಏನು ಮಾಡುತ್ತಿಲ್ಲ. ಬಡವರ ನೋವು ಯಾರು ಕೇಳುವವರಿಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...