ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೆ ಮಾರಾಟ ಮಾಡಿದ ದಂಪತಿ

Date:

ಡ್ರಗ್ಸ್ ಖರೀದಿಸುವ ಸಲುವಾಗಿ ಒಂದು ತಿಂಗಳ ಮಗು ಸೇರಿ ಸ್ವಂತ ಇಬ್ಬರು ಮಕ್ಕಳನ್ನೇ 74 ಸಾವಿರ ರೂ.ಗಳಿಗೆ ಮಾರಾಟ ಮಾಡಿದ ಘಟನೆ ಮುಂಬೈ ನಗರದ ಅಂಧೇರಿಯಲ್ಲಿ ಇಂದು (ನ.24) ನಡೆದಿದೆ.

ಘಟನೆ ಸಂಬಂಧ ದಂಪತಿ ಸೇರಿದಂತೆ ಮೂವರನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಮಧ್ಯವರ್ತಿಯೊಬ್ಬ ಕೂಡ ಸೇರಿದ್ದಾನೆ. ಒಂದು ತಿಂಗಳ ಮಗುವನ್ನು ರಕ್ಷಿಸಲಾಗಿದ್ದು, ಎರಡು ವರ್ಷದ ಇನ್ನೊಂದು ಮಗುವಿನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

“ದಂಪತಿಗಳು ಮಾದಕ ವ್ಯಸನಿಗಳಾಗಿದ್ದು ಸ್ವಂತ ಮಕ್ಕಳನ್ನೇ ಅಂಧೇರಿಯಲ್ಲಿ ಮಾರಾಟ ಮಾಡಿದ್ದಾರೆ. ದಂಪತಿಯ ಮನೆಯವರಿಗೆ ವಿಷಯ ತಿಳಿದ ನಂತರ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. 2 ವರ್ಷದ ಗಂಡು ಮಗುವನ್ನು 60 ಸಾವಿರಕ್ಕೆ ಮಾರಾಟ ಮಾಡಿದರೆ. ಒಂದು ತಿಂಗಳ ಹೆಣ್ಣು ಮಗುವನ್ನು 14 ಸಾವಿರ ರೂ. ಗಳಿಗೆ ದಂಪತಿ ಮಾರಾಟ ಮಾಡಿದ್ದಾರೆ” ಎಂದು ಮುಂಬೈ ಅಪರಾಧ ವಿಭಾಗದ ಅಧಿಕಾರಿ ದಯಾ ನಾಯಕ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆ | ತ್ರಿಕೋನ ಸ್ಪರ್ಧೆಯ ನಡುವೆ ಗದ್ದುಗೆಗಾಗಿ ಕಾಂಗ್ರೆಸ್, ಬಿಆರ್‌ಎಸ್‌ ಜಿದ್ದಾಜಿದ್ದಿ

“ದಂಪತಿ ಮಾದಕ ವ್ಯಸನಕ್ಕೆ ತೀರ ದಾಸರಾಗಿದ್ದರು. ಅದೇ ಸಮಯದಲ್ಲಿ ಆರೋಪಿ ರಾಥೋಡ್ ದಂಪತಿಯ ಸಂಪರ್ಕಕ್ಕೆ ಬಂದಿದ್ದಾನೆ. ದಂಪತಿ ತಮ್ಮ ಮಕ್ಕಳನ್ನು 74,000 ರೂ.ಗೆ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದಾರೆ. ಮಕ್ಕಳನ್ನು ಮಾರಾಟ ಮಾಡಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ದಂಪತಿಗೆ ಇತ್ತೀಚೆಗಷ್ಟೇ ಹೆಣ್ಣು ಮಗು ಜನಿಸಿತ್ತು” ಎಂದು ದಯಾ ನಾಯಕ್‌ ಹೇಳಿದರು.

ಘಟನೆ ಬೆಳಕಿಗೆ ಬಂದ ನಂತರ ಸಂಬಂಧಿಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...