ಮುಂಬೈ | ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನ ಕಪಾಳಕ್ಕೆ ಹೊಡೆದು ಹಲ್ಲೆ

Date:

ಮುಂಬೈನಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಓರ್ವ ಮುಸ್ಲಿಂ ಪ್ರಯಾಣಿಕನ ಕಪಾಳಕ್ಕೆ ಹೊಡೆದು ಮತ್ತೋರ್ವ ಪ್ರಯಾಣಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆ ಬಗ್ಗೆ, ಇಂಡಿಗೋ ಏರ್‌ಲೈನ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ವಿಮಾನದಲ್ಲಿ ತೀವ್ರ ಆತಂಕಕ್ಕೆ ಒಳಗಾದ ಪ್ರಯಾಣಿಕನೊಬ್ಬನಿಗೆ ಸಹ-ಪ್ರಯಾಣಿಕನೊಬ್ಬ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಿದೆ.

ಮುಂಬೈನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಕೋಮು ದ್ವೇಷದ ಹಿಂಸಾಚಾರ ಎಂದು ನೆಟ್ಟಿಗರು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಮುಂಬೈನಿಂದ ಕೋಲ್ಕತ್ತಾಗೆ ಇಂಡಿಗೋ ವಿಮಾನ 6E-138 ಹೊರಟಿತ್ತು. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಆತಂಕಗೊಂಡಿದ್ದರು. ಆತನಿಗೆ ವಿಮಾನ ಸಿಬ್ಬಂದಿ ಉಪಚರಿಸುತ್ತಿದ್ದವು. ಈ ವೇಳೆ, ಆತನಿಗೆ ಮತ್ತೊಬ್ಬ ಪ್ರಯಾಣಿಕ ಹಠಾತ್ತಾಗಿ ಕಪಾಳಕ್ಕೆ ಹೊಡೆದಿದ್ದಾರೆ. ಹಲ್ಲೆಗೈದ ಆರೋಪಿ ಸಂತ್ರಸ್ತನೊಂದಿಗೆ ಕೋಪದಿಂದ ಮಾತನಾಡುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಕೂಡಲೇ ಕಾರ್ಯಪ್ರವೃತ್ತರಾದ ವಿಮಾನದ ಸಿಬ್ಬಂದಿ, ಹಲ್ಲೆ ನಡೆಸಿದ ವ್ಯಕ್ತಿಯನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು.

ವಿಡಿಯೋ ಹಂಚಿಕೊಂಡಿರುವ ಹಲವಾರು ನೆಟ್ಟಿಗರು, ಘಟನೆಯನ್ನು “ದ್ವೇಷದ ಕೃತ್ಯ” ಮತ್ತು “ಕೋಮು ಹಿಂಸಾಚಾರ” ಎಂದು ಖಂಡಿಸಿದ್ದಾರೆ. ನಾಗರೀಕ ಹಕ್ಕು ಕಾರ್ಯಕರ್ತರು ಹಾಗೂ ಪ್ರಭಾವಿಗಳು ಈ ಘಟನೆಯನ್ನು “ಅಸಹ್ಯಕರ” ಎಂದು ಬಣ್ಣಿಸಿದ್ದಾರೆ. ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅನೇಕರು ಒತ್ತಾಯಿಸಿದ್ದಾರೆ.

ಖ್ಯಾತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರು X (ಹಿಂದಿನ ಟ್ವಿಟ್ಟರ್) ನಲ್ಲಿ, “ಇದು ಅತ್ಯಂತ ಅಸಹ್ಯಕರ ಘಟನೆ. ನಾಗರಿಕ ಸಮಾಜವು ಹಲ್ಲೆ ಮಾಡಿದವನ ಹೆಸರನ್ನು ಬಹಿರಂಗಪಡಿಸಿ, ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಂತಹ ಕಷ್ಟದ ಸಮಯದಲ್ಲಿ ನೆರವಿಗೆ ಬಂದ ಇತರ ಪ್ರಯಾಣಿಕರು ಮತ್ತು ಸಿಬ್ಬಂದಿಯ ಕಾರ್ಯ ಶ್ಲಾಘನೀಯ” ಎಂದು ಬರೆದಿದ್ದಾರೆ.

ಈ ಘಟನೆಯ ಕುರಿತು ಇಂಡಿಗೋ ವಿಮಾನಯಾನ ಸಂಸ್ಥೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. “ನಮ್ಮ ವಿಮಾನದಲ್ಲಿ ಇಂತಹ ಅಶಿಸ್ತಿನ ವರ್ತನೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ಮತ್ತು ಘನತೆಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಸಂಸ್ಥೆ ತಿಳಿಸಿದೆ.

ಹಾಗೆಯೇ, ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು “ಅಶಿಸ್ತಿನ ಪ್ರಯಾಣಿಕ” ಎಂದು ಗುರುತಿಸಿ, ವಿಮಾನ ಕೋಲ್ಕತ್ತಾಗೆ ತಲುಪಿದ ಕೂಡಲೇ ಭದ್ರತಾ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಸಂಸ್ಥೆ ಹೇಳಿದೆ. ನಿಯಮಾನುಸಾರ ಸಂಬಂಧಿತ ನಿಯಂತ್ರಕ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಮತ್ತು ಎಲ್ಲಾ ವಿಮಾನಗಳಲ್ಲಿ ಸುರಕ್ಷಿತ ಹಾಗೂ ಗೌರವಯುತ ವಾತಾವರಣವನ್ನು ಕಾಪಾಡಲು ನಾವು ಬದ್ಧರಾಗಿದ್ದೇವೆ ಎಂದು ಇಂಡಿಗೋ ಹೇಳಿದೆ.

ಈ ಘಟನೆಯು ವಿಮಾನಗಳಲ್ಲಿ ಪ್ರಯಾಣಿಕರ ನಡವಳಿಕೆ ಮತ್ತು ಸುರಕ್ಷತೆ ಕುರಿತು ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ. ವಿಮಾನಯಾನ ಸಂಸ್ಥೆಗಳು ಇಂತಹ ಘಟನೆಗಳನ್ನು ತಡೆಯಲು ಮತ್ತು ಪ್ರಯಾಣಿಕರಿಗೆ ಸುರಕ್ಷಿತ ವಾತಾವರಣ ಒದಗಿಸಲು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...