ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮುಂಬೈ ನಿವಾಸದ ಮೇಲೆ ಪೊಲೀಸರ ದಾಳಿ

Date:

ದೆಹಲಿಯ ನ್ಯೂಸ್‌ಕ್ಲಿಕ್ ವೆಬ್‌ ಪೋರ್ಟಲ್‌ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಅವರ ಮುಂಬೈ ನಿವಾಸದಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ತೀಸ್ತಾ ಸೆಟಲ್ವಾಡ್‌ ಅವರು ಟ್ರಿಕಾಂಟಿನೆಂಟಲ್ ಇನ್‌ಸ್ಟಿಟ್ಯೂಟ್ ಫಾರ್ ಸೋಶಿಯಲ್ ರಿಸರ್ಚ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯ ಮೂಲಕ ನ್ಯೂಸ್‌ಕ್ಲಿಕ್‌ಗೆ ತೀಸ್ತಾ ಅವರು ಲೇಖನಗಳನ್ನು ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

‘ನ್ಯೂಸ್ ಕ್ಲಿಕ್’ ಪೋರ್ಟಲ್ ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎನ್ನುವ ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದೆಹಲಿ ಪೊಲೀಸರು ಆಗಸ್ಟ್ 17ರಂದು ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ, ಪತ್ರಕರ್ತರಾದ ಅಭಿಸರ್ ಶರ್ಮಾ, ಔನಿಂದ್ಯೋ ಚಕ್ರವರ್ತಿ ಮತ್ತು ಭಾಷಾ ಸಿಂಗ್ ಮತ್ತು ವಿಡಂಬನಕಾರ ಸಂಜಯ್ ರಾಜೌರಾ ಸೇರಿದಂತೆ ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ಹಲವಾರು ವ್ಯಕ್ತಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ನ್ಯೂಸ್ ಕ್ಲಿಕ್’ ವೆಬ್ ಪೋರ್ಟಲ್ ಕಚೇರಿ-ಪತ್ರಕರ್ತರ ಮನೆಗಳ ಮೇಲೆ ದೆಹಲಿ ಪೊಲೀಸ್ ದಾಳಿ

ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ, ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಪತ್ರಕರ್ತರಾದ ಅಭಿಸರ್ ಶರ್ಮಾ ಅವರು ಟ್ವಿಟರ್‌ ಮೂಲಕ ಪೊಲೀಸ್‌ ದಾಳಿಯ ಬೆಳವಣಿಗೆಗಳನ್ನು ದೃಢಪಡಿಸಿದ್ದಾರೆ. ಅಲ್ಲದೆ ತಮ್ಮ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ದಾಳಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್‌ನ ಎಲ್ಲ ಶ್ರೇಣಿಗಳ ತಂಡಗಳನ್ನು ನಿಯೋಜಿಸಲಾಗಿದೆ. ಸುಮಾರು 500 ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು.

ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ದಾಳಿ ಪ್ರಾರಂಭವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...