ಮುಂಬೈನಲ್ಲಿ ಭಾರೀ ಮಳೆ | ನಾಲ್ವರ ಸಾವು; ಶಾಲಾ-ಕಾಲೇಜುಗಳಿಗೆ ರಜೆ

Date:

ಬುಧವಾರ ಸಂಜೆ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು ತೀವ್ರ ಪ್ರವಾಹ, ಟ್ರಾಫಿಕ್ ಜಾಮ್, ಸೆಂಟ್ರಲ್ ರೈಲ್ವೆ ಸೇವೆಗಳಿಗೆ, ವಿಮಾನದ ಮಾರ್ಗಕ್ಕೆ ಅಡ್ಡಿ ಉಂಟು ಮಾಡಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.

ಬುಧವಾರ ಸಂಜೆ 5 ಗಂಟೆಗೆ ಆರಂಭವಾದ ಮಳೆಯು ಐದು ಗಂಟೆಗಳ ಕಾಲ ಸುರಿದಿದೆ. ಈ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದಲ್ಲಿ 200 ಮಿ.ಮೀ.ಗೂ ಹೆಚ್ಚು ಮಳೆಯಾಗಿದ್ದು, ಪ್ರಯಾಣಿಕರು ರಸ್ತೆಗಳಲ್ಲಿ ಮತ್ತು ರೈಲು ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದರು.

45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದಲ್ಲಿ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದರೆ, ಕಲ್ಯಾಣ್‌ನ ಕಲ್ಲು ಕ್ವಾರಿಯಲ್ಲಿ ಇಬ್ಬರು ಕಾರ್ಮಿಕರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜಯಪುರ | ಭಾರೀ ಮಳೆಗೆ ನಲುಗಿದ ಗುಮ್ಮಟ ನಗರಿ; ಜನ-ಜೀವನ ಅಸ್ತವ್ಯಸ್ತ

ಈ ನಡುವೆ ಭಾರತೀಯ ಹವಾಮಾನ ಇಲಾಖೆಯು ಬುಧವಾರ ಸಂಜೆ ಮುಂಬೈ, ಥಾಣೆ ಮತ್ತು ರಾಯಗಢಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಗುರುವಾರ ಬೆಳಗಿನ ತನಕ ಅತಿ ಹೆಚ್ಚು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಎಚ್ಚರಿಕೆ ನೀಡಿದೆ. ಮುಂದಿ ಕೆಲವು ದಿನಗಳ ಕಾಲವೂ ಭಾರೀ ಮಳೆ ಇರಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂಬೈ, ಥಾಣೆ, ಪಾಲ್ಘರ್, ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಜನರು ಅಗತ್ಯವಿಲ್ಲದ ಹೊರತಾಗಿ ಮನೆಯಿಂದ ಹೊರಬರದಂತೆ ಮುಂಬೈ ಪೊಲೀಸರು ಸಲಹೆ ನೀಡಿದ್ದಾರೆ.

ಇನ್ನು ಮುಂಬೈನಲ್ಲಿ ಸಾಕಷ್ಟು ಜನರು ಪ್ರತಿನಿತ್ಯ ರೈಲಿನಲ್ಲೇ ಪ್ರಯಾಣ ಮಾಡುತ್ತಾರೆ. ಆದರೆ ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ರೈಲುಗಳು ರದ್ದಾಗಿದೆ. ಕೆಲವು ಸ್ಥಳಗಳಲ್ಲಿ ರೈಲು ಸೇವೆ ವಿಳಂಬವಾಗಿ ಆರಂಭವಾಗಿದೆ.

ಇದನ್ನು ಓದಿದ್ದೀರಾ? ವಿಜಯಪುರ | ಭಾರೀ ಮಳೆಗೆ ನಲುಗಿದ ಗುಮ್ಮಟ ನಗರಿ; ಜನ-ಜೀವನ ಅಸ್ತವ್ಯಸ್ತ

ಈ ನಡುವೆ ಮುಂಬೈ ವಿಮಾನ ನಿಲ್ದಾಣದಲ್ಲಿ 14 ವಿಮಾನಗಳ ಸೇವೆ ವ್ಯತ್ಯಯವಾಗಿದೆ ಮತ್ತು ಏಳು ಇತರ ವಿಮಾನಗಳು ಲ್ಯಾಂಡಿಂಗ್ ಅನ್ನು ಬೇರೆಡೆ ಮಾಡಲಾಗಿದೆ.

ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಾಗಿತ್ತು. ಆದರೆ ಭಾರೀ ಮಳೆ ಕಾರಣದಿಂದಾಗಿ ಈ ಮೋದಿ ಪುಣೆ ಭೇಟಿ ರದ್ದುಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...