ರೀಲ್ಸ್ ಮಾಡುವಾಗ 300 ಅಡಿ ಜಲಪಾತಕ್ಕೆ ಬಿದ್ದು ‘ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್’ ಮೃತ್ಯು

Date:

ಮುಂಬೈ ಮೂಲದ ‘ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್’ ಆನ್ವಿ ಕಾಮ್ದಾರ್ (27) ರೀಲ್ಸ್ ಮಾಡುವ ವೇಳೆ ಸುಮಾರು 300 ಅಡಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ @theglocaljournal ಎಂಬ ಹ್ಯಾಂಡಲ್ ಮೂಲಕ ತನ್ನ ಪ್ರಯಾಣದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಚಾರ್ಟರ್ಡ್ ಅಕೌಂಟೆಂಟ್ ಆನ್ವಿ ಕಾಮ್ದಾರ್ ತನ್ನ ಸ್ನೇಹಿತರೊಂದಿಗೆ ಕುಂಭೆ ಜಲಪಾತಕ್ಕೆ ಹೋಗಿದ್ದು ಅಲ್ಲಿ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಕಾಮ್ದಾರ್ ತನ್ನ 7 ಸ್ನೇಹಿತರ ತಂಡದೊಂದಿಗೆ ಜುಲೈ 16ರಂದು ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪ್ರಸಿದ್ಧ ಕುಂಭೆ ಜಲಪಾತಕ್ಕೆ ವಿಹಾರಕ್ಕೆ ತೆರಳಿದ್ದರು. ವಿಡಿಯೋ ಚಿತ್ರೀಕರಣ ಮಾಡುವಾಗ ಕಾಮ್ದಾರ್ ಸುಮಾರು 300 ಅಡಿ ಕಮರಿಗೆ ಜಾರಿ ಬಿದ್ದಿದ್ದಾರೆ ಎಂದು ಮಂಗಾವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ತ್ವರಿತವಾಗಿ ರಕ್ಷಣಾ ಕಾರ್ಯವನ್ನು ಆರಂಭಿಸಿದರು. ರಕ್ಷಣಾ ತಂಡಕ್ಕೆ ಕೋಸ್ಟ್ ಗಾರ್ಡ್, ಕೋಲಾಡ್ ರಕ್ಷಣಾ ತಂಡ ಮತ್ತು ಮಹಾರಾಷ್ಟ್ರ ರಾಜ್ಯ ವಿದ್ಯುತ್ ಮಂಡಳಿಯ ಸಿಬ್ಬಂದಿಗಳು ಬೆಂಬಲ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿದ್ದೀರಾ?  ಮುಂಬೈ: ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ  

“ನಾವು ಸ್ಥಳವನ್ನು ತಲುಪುವಷ್ಟರಲ್ಲಿ ಯುವತಿ ಸುಮಾರು 300-350 ಅಡಿ ಕೆಳಗೆ ಬಿದ್ದಿದ್ದಾಳೆ ಎಂಬುವುದು ನಮಗೆ ತಿಳಿಯಿತು. ಅವಳನ್ನು ನಾವು ಪತ್ತೆ ಹಚ್ಚಿದ ಬಳಿಕವೂ ಆಕೆಗೆ ಅಧಿಕ ಗಾಯಗಳಾಗಿದ್ದರಿಂದ ಮತ್ತು ಜೋರಾಗಿ ಮಳೆಯಾಗುತ್ತಿದ್ದರಿಂದ ಅವಳನ್ನು ಎಬ್ಬಿಸಲು ಕಷ್ಟವಾಯಿತು. ಆದ್ದರಿಂದ ಲಂಬವಾದ ರಾಟೆ ಬಳಸಿ ಅವಳನ್ನು ಹೊರಕರೆತರಲು ನಾವು ನಿರ್ಧರಿಸಿದೆವು” ಅಧಿಕಾರಿ ತಿಳಿಸಿರುವುದಾಗಿ ವರದಿಯಾಗಿದೆ.

ಜಲಪಾತದಡಿ ದೊಡ್ಡ ಕಲ್ಲುಗಳು ಬೀಳುತ್ತಲೇ ಇದ್ದ ಕಾರಣ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಜಟಿಲವಾಗಿದೆ ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಮತ್ತೊಬ್ಬ ವ್ಯಕ್ತಿ ತಿಳಿಸಿದ್ದಾರೆ. ಆರು ಗಂಟೆಗಳ ಕಾರ್ಯಾಚರಣೆಯ ನಂತರ ಕಾಮ್ದಾರ್‌ ಅವರನ್ನು ಜಲಪಾತದಿಂದ ಮೇಲಕ್ಕೆತ್ತಲಾಗಿದೆ.

ಆನ್ವಿ ಕಾಮ್ದಾರ್‌ರನ್ನು ರಕ್ಷಿಸಿದವರು ಸಮೀಪದ ಮಂಗಾವ್ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆನ್ವಿ ಕಾಮ್ದಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಮಳೆಗಾಲದಲ್ಲಿ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರು ಹೆಚ್ಚಿನ ಜಾಗರೂಕರಾಗಿರಲು ಅಧಿಕಾರಿಗಳು ಒತ್ತಾಯಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...