‘ದೃಶ್ಯಂ’ ಸಿನಿಮಾದಿಂದ ಪ್ರೇರಿತನಾಗಿ ಮಹಿಳೆಯ ಹತ್ಯೆ; ಕೊಲೆ ಆರೋಪಿ ಹೇಳಿಕೆ

Date:

ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ ‘ದೃಶ್ಯಂ’ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು ವರಿದಯಾಗಿದೆ.

ಕಾನ್ಪುರದ ನಿವಾಸಿ ಏಕ್ತಾ ಗುಪ್ತಾ ಅವರು ಜೂನ್ 24ರಂದು ನಾಪತ್ತೆಯಾಗಿದ್ದರು. ಅವರನ್ನು ಜಿಮ್‌ ಟ್ರೈನರ್‌ ವಿಮಲ್ ಸೋನಿ ಅಪಹರಿಸಿದ್ದಾನೆಂದು ಮಹಿಳೆಯ ಪತಿ ರಾಹುಲ್ ಗುಪ್ತಾ ಆರೋಪಿಸಿದ್ದರು. ಪೊಲೀಸರಿಗೆ ದೂರು ನೀಡಿದ್ದರು. ಬಳಿಕ, ಆರೋಪಿ ವಿಮಲ್‌ನನ್ನು ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ, ಆಕೆಯನ್ನು ತಾನೇ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಮೃತದೇಹವನ್ನು ಉನ್ನತ ಸರ್ಕಾರಿ ಅಧಿಕಾರಿಯೊಬ್ಬರ ನಿವಾಸದ ಬಳಿ ಸಮಾಧಿ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಈ ಘಟನೆಯು ಅಜಯ್ ದೇವಗನ್ ಅಭಿನಯದ ‘ದೃಶ್ಯಂ’ ಸಿನಿಮಾದ ಕಥೆಗೆ ಹೋಲಿಕೆಯಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2015ರಲ್ಲಿ ಬಿಡುಗಡೆಯಾಗಿದ್ದ ‘ದೃಶ್ಯಂ’ ಸಿನಿಮಾದಲ್ಲಿ ನಾಯಕನು ಕೊಲೆಗೀಡಾದ ವ್ಯಕ್ತಿಯ ಮೃತದೇಹವನ್ನು ಪೊಲೀಸ್‌ ಠಾಣೆಯ ಅಡಿಯಲ್ಲಿ ಹೂತುಹಾಕುವ ದೃಶ್ಯವನ್ನು ಒಳಗೊಂಡಿದೆ. ಆರೋಪಿಯು ‘ದೃಶ್ಯಂ’ ಸನಿಮಾವನ್ನು ಹಲವಾರು ಬಾರಿ ವೀಕ್ಷಿಸಿದ್ದನು. ಆ ದೃಶ್ಯಗಳು ಮಹಿಳೆಯ ಮೃತದೇಹವನ್ನು ಐಷಾರಾಮಿ ಪ್ರದೇಶದಲ್ಲಿ ಹೂತುಹಾಕುವ ಯೋಜನೆಯನ್ನು ಆರೋಪಿಯಲ್ಲಿ ಹುಟ್ಟುಹಾಕಿದ್ದವು. ಈ ಬಗ್ಗೆ ಆರೋಪಿಯೇ ವಿವರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ನಡೆದ ದಿನದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆಯಲಾಗಿದೆ. ಮೃತ ಮಹಿಳೆ ಮತ್ತು ಆರೋಪಿ ಜಿಮ್ ಟ್ರೈನರ್‌ ನಡುವೆ ವಿವಾಹೇತರ ಸಂಬಂಧ ಹೊಂದಿದ್ದರು. ಇತ್ತೀಚಗೆ, ಆರೋಪಿಗೆ ವಿವಾಹ ನಿಶ್ಚಯವಾಗಿದ್ದರಿಂದ ಮಹಿಳೆ ಅಸಮಾಧಾನಗೊಂಡಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಆಕೆಯನ್ನು ಆರೋಪಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಲ್ ಸೋನಿ ಕೆಲಸ ಮಾಡುತ್ತಿದ್ದ ಜಿಮ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಕಟ್ಟಡವೊಂದರಲ್ಲಿ ಆಕೆಯ ಮೃತದೇಹ ದೊರೆತಿದೆ. ಆ ಕಟ್ಟಡದ ಒಂದು ಭಾಗದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಅವರ ಕುಟುಂಬವು ವಾಸಿಸುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...