ಅನಿವಾಸಿ ಭಾರತೀಯನ ಕೊಲೆ; 10 ಮಂದಿಗೆ ಜೀವಾವಧಿ ಶಿಕ್ಷೆ

Date:

‘ಸ್ವಾಧ್ಯಾಯ ಪರಿವಾರ’ ಎಂಬ ಆಧ್ಯಾತ್ಮಿಕ ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರವನ್ನು ಪ್ರಶ್ನಿಸಿದ್ದ ಕಾರಣಕ್ಕೆ ಅನಿವಾಸಿ ಭಾರತೀಯನನ್ನು ಕೊಲೆ ಮಾಡಿದ ಪ್ರಕರಣದಲ್ಲಿ 10 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ 2006ರಲ್ಲಿ ಅನಿವಾಸಿ ಭಾರತೀಯ ಪಂಕಜ್ ತ್ರಿವೇದಿ ಎಂಬಾತನನ್ನು ಕೊಲೆ ಮಾಡಲಾಗಿತ್ತು. ‘ಸ್ವಾಧ್ಯಾಯ ಪರಿವಾರ’ ಆಧ್ಯಾತ್ಮಿಕ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿದ್ದ ತ್ರಿವೇದಿ, ಸಂಸ್ಥೆಗೆ ಬಂದಿದ್ದ ವಿದೇಶಿ ದೇಣಿಗೆಯಲ್ಲಿನ ಅವ್ಯವಹಾರದ ಬಗ್ಗೆ ಪ್ರಶ್ನಿಸಿದ್ದರು ಎಂದು ಹೇಳಲಾಗಿದೆ.

ಸಂಸ್ಥೆಗೆ ಬಂದ ದೇಣಿಗೆ ಕುರಿತು ಪ್ರಶ್ನಿಸಿದ್ದಕ್ಕಾಗಿಯೇ ಅವರನ್ನು ಕೊಲೆ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿದ ಅಹಮದಾಬಾದ್‌ ಸೆಷನ್ಸ್‌ ಕೋರ್ಟ್‌, ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದೆ. 10 ಮಂದಿಗೂ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.

2001ರಲ್ಲಿ ಸಂಭವಿಸಿದ್ದ ಭುಜ್ ಭೂಕಂಪದಿಂದಾದ ನಷ್ಟಕ್ಕೆ ಪರಿಹಾರವಾಗಿ ‘ಸ್ವಾಧ್ಯಾಯ ಪರಿವಾರ’ ಸಂಸ್ಥೆಯು ವಿದೇಶಿ ದೇಣಿಗೆ ಪಡೆಯಲು ತ್ರಿವೇದಿ ಸಹಾಯ ಮಾಡಿದ್ದರು. ಆದಾಗ್ಯೂ, ಹಣದ ಬಳಕೆ ಬಗ್ಗೆ ಸಂಸ್ಥಯನ್ನು ತ್ರಿವೇದಿ ಪ್ರಶ್ನಿಸಿದ್ದರು. ಆ ಕಾರಣಕ್ಕೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಪ್ರಕರಣ ದಾಖಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...