ಭಾರತದಲ್ಲಿನ ಮುಸ್ಲಿಮರು ಔರಂಗಜೇಬನ ವಂಶಸ್ಥರಲ್ಲ: ದೇವೇಂದ್ರ ಫಡ್ನವಿಸ್

Date:

  • ಕೆಲವು ದಿನಗಳ ಹಿಂದೆ ಔರಂಗಜೇಬನ ಬಗ್ಗೆ ಹೇಳಿಕೆ ನೀಡಿದ್ದ ದೇವೇಂದ್ರ ಫಡ್ನವಿಸ್
  • ಜೂನ್ 8ರಂದು ಕೊಲ್ಹಾಪುರದಲ್ಲಿ ಔರಂಗಜೇಬ್ ಉಲ್ಲೇಖಿಸಿ ಯುವಕರು ಆಕ್ಷೇಪಾರ್ಹ ಪೋಸ್ಟ್

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ಮೊಘಲ್‌ ರಾಜ ಔರಂಗಜೇಬ್‌ನ ಬಗ್ಗೆ ಮತ್ತೆ ಮಾತನಾಡಿದ್ದಾರೆ. ಭಾರತದಲ್ಲಿರುವ ಯಾವುದೇ ಮುಸ್ಲಿಮರು ಔರಂಗಜೇಬನ ವಂಶಸ್ಥರಲ್ಲ, ದೇಶದ ರಾಷ್ಟ್ರೀಯವಾದಿ ಮುಸ್ಲಿಮರಾಗಿದ್ದಾರೆ ಎಂದು ಫಡ್ನವಿಸ್‌ ಹೇಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ಒಂಬತ್ತು ವರ್ಷ ಆಡಳಿತ ಪೂರೈಸಿದ ಸ್ಮರಣಾರ್ಥ ಬಿಜೆಪಿ ಅಕೋಲಾದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶದಲ್ಲಿ ದೇವೇಂದ್ರ ಫಡ್ನವಿಸ್‌ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಛತ್ರಪತಿ ಸಾಂಬಾಜಿ ನಗರದಲ್ಲಿರುವ ಔರಂಗಜೇಬನ ಸ್ಮಾರಕಕ್ಕೆ ವಂಚಿತ ಬಹುಜನ ಅಘಾಡಿ (ವಿಬಿಎ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು ಭೇಟಿ ನೀಡಿದ ನಂತರ ದೇವೇಂದ್ರ ಫಡ್ನವಿಸ್ ಅವರು ಔರಂಗಜೇಬನ ಕುರಿತು ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವೇಂದ್ರ ಫಡ್ನವಿಸ್‌ ಅವರು ಕೆಲವು ದಿನಗಳ ಹಿಂದೆ ಕಾರ್ಯಕ್ರಮದಲ್ಲಿ ‘ಔರಂಗಜೇಬನ ಉತ್ತರಾಧಿಕಾರಿಗಳು’ ಎಂದು ಹೇಳಿಕೆ ನೀಡಿದ್ದರು. ಇದರಿಂದ ಭಾರೀ ವಿವಾದ ಉಂಟಾಗಿತ್ತು.

“ನಮ್ಮೆಲ್ಲರಿಗೂ ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ರಾಜ. ಮುಸ್ಲಿಮರು ಸಹ ಶಿವಾಜಿ ಅವರನ್ನು ಗೌರವಿಸುತ್ತಾರೆ. ಔರಂಗಜೇಬ್ ಮತ್ತು ಅವನ ವಂಶದವರು ಹೊರಗಿನಿಂದ ವಲಸೆ ಬಂದವರಾಗಿದ್ದಾರೆ. ರಾಷ್ಟ್ರೀಯ ವಿಚಾರಗಳನ್ನು ಹೊಂದಿರುವ ಭಾರತದ ಮುಸ್ಲಿಮರು ಔರಂಗಜೇಬ್‌ನನ್ನು ಎಂದಿಗೂ ಒಪ್ಪುವುದಿಲ್ಲ” ಎಂದು ಫಡ್ನವಿಸ್ ಪ್ರತಿಪಾದಿಸಿದರು.

ದೇವೇಂದ್ರ ಫಡ್ನವಿಸ್ ಅವರು ಕಳೆದ ವಾರ ಔರಂಗಜೇಬ್ ಕುರಿತ ಪೋಸ್ಟರ್ ಹಂಚಿಕೆ ಕುರಿತು ಮಾತನಾಡಿದ್ದರು.

“ಇದ್ದಕ್ಕಿದ್ದಂತೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಔರಂಗಜೇಬನ ಮಕ್ಕಳು ಹುಟ್ಟಿಕೊಂಡಿದ್ದಾರೆ. ಔರಂಗಜೇಬ್ ಕುರಿತಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದರಿಂದ ಉದ್ವಿಗ್ನತೆ ಉಂಟಾಗಿದೆ” ಎಂದು ಫಡ್ನವಿಸ್ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಕೊಲೆ ಆರೋಪಿಯನ್ನು ಅಟ್ಟಾಡಿಸಿ ಹತ್ಯೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಜೂನ್ 8ರಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಲವು ಯುವಕರು ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಉಲ್ಲೇಖಿಸಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪೋಸ್ಟ್ ಮಾಡಿದ್ದರು. ಘಟನೆ ಬಳಿಕ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಫಡ್ನವಿಸ್‌ ಅವರ ವಿರುದ್ಧ ಕೆಲವರು ಕಿಡಿಕಾರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...