ನನ್ನ ಹೋರಾಟ ಕೊನೆಗೊಂಡಿಲ್ಲ, ಈಗಷ್ಟೇ ಶುರುವಾಗಿದೆ: ವಿನೇಶ್ ಫೋಗಟ್

Date:

“ನನ್ನ ಹೋರಾಟ ಕೊನೆಗೊಂಡಿಲ್ಲ, ಈಗಷ್ಟೇ ಶುರುವಾಗಿದೆ” ಎಂದು ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಬರೀ ನೂರು ಗ್ರಾಂ ತೂಕ ಹೆಚ್ಚಳದ ಕಾರಣದಿಂದಾಗಿ ಅನರ್ಹಗೊಂಡಿದ್ದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರಿಯಾಣದ ರೋಹ್ತಕ್ ಸರ್ವಖಾಪ್ ಪಂಚಾಯತ್ ಭಾನುವಾರ ಚಿನ್ನದ ಪದಕವನ್ನು ನೀಡಿ ಗೌರವಿಸಿತು.

ಈ ವೇಳೆ ಮಾತನಾಡಿದ ಫೋಗಟ್, “ನನ್ನ ಹೋರಾಟ ಕೊನೆಗೊಂಡಿಲ್ಲ, ಈಗಷ್ಟೇ ಶುರುವಾಗಿದೆ. ನಮ್ಮ ಹೆಣ್ಣುಮಕ್ಕಳ ಗೌರವಕ್ಕಾಗಿ ಹೋರಾಟ ಈಗಷ್ಟೇ ಶುರುವಾಗಿದೆ. ನಮ್ಮ ಧರಣಿ ಸತ್ಯಾಗ್ರಹದಲ್ಲಿ ನಾವು ಅದನ್ನೇ ಹೇಳಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತೀಯರ ಮನ ಗೆದ್ದ ವಿನೇಶ್ ಫೋಗಟ್‌ಗೆ ಪ್ರೀತಿಯ ಸ್ವರ್ಣ ಸ್ವಾಗತ

“ನಾನು ಪ್ಯಾರಿಸ್‌ನಲ್ಲಿ ಆಡಲು ಸಾಧ್ಯವಾಗದಿದ್ದಾಗ, ನಾನು ತುಂಬಾ ದುರದೃಷ್ಟಕರ ವ್ಯಕ್ತಿ ಎಂದು ಭಾವಿಸಿದೆ. ಆದರೆ ಭಾರತಕ್ಕೆ ಹಿಂದಿರುಗಿದ ನಂತರ, ಇಲ್ಲಿ ಎಲ್ಲರ ಪ್ರೀತಿ ಮತ್ತು ಬೆಂಬಲವನ್ನು ನೋಡಿದ ನಂತರ ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ” ಎಂದು ತಿಳಿಸಿದರು.

ಕಳೆದ ವರ್ಷ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ನಾಯಕ ಬ್ರಿಜ್‌ಭೂಷಣ್ ಶರಣ್ ಅವರ ಮೇಲೆ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಹೆಚ್ಚಾಗಿ ಹರಿಯಾಣದ ಕುಸ್ತಿಪಟುಗಳು ಈ ಹೋರಾಟದ ಭಾಗವಾಗಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...