ನನ್ನ ರಾಜ್ಯ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ; ಮೇರಿ ಕೋಮ್‌ ಮನವಿ

Date:

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌, ಅರೆಸೇನಾ ಪಡೆಗಳು ಹಾಗೂ ರಾಜ್ಯ ಪೊಲೀಸರ ಜಂಟಿ ಪಡೆ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜಧಾನಿ ಇಂಫಾಲ, ಚುರಚಂದ್‌ಪುರ ಹಾಗೂಕಾಂಗ್‌ಪೋಕ್ಪಿಯಲ್ಲಿ ಹಿಂಸಾಚಾರ ಭುಗಿಲೆದ್ದ ಬಳಿಕ  ಬುಧರವಾರ ರಾತ್ರಿ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ.  ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಯವಿಟ್ಟು ಸಹಾಯ ಮಾಡಿ: ಮೇರಿ ಕೋಮ್‌ ಮನವಿ

ʻನನ್ನ ರಾಜ್ಯ ಮಣಿಪುರ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದ್ದು, ದಯವಿಟ್ಟು ಸಹಾಯ ಮಾಡಿʼ  ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ,ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಒಲಿಂಪಿಕ್ ಪದಕ ವಿಜೇತೆ, ಹಿರಿಯ ಮಹಿಳಾ ಬಾಕ್ಸರ್ ಹಾಗೂ ರಾಜ್ಯಸಭಾ ಸದಸ್ಯೆ ಮೇರಿ ಕೋಮ್, ಟ್ವಟಿರ್‌ ಮೂಲಕ  ಮನವಿ ಮನವಿ ಮಾಡಿದ್ದಾರೆ.

9,000 ಕ್ಕೂ ಹೆಚ್ಚು ಅಧಿಕ ನಾಗರಿಕರ ಸ್ಥಳಾಂತರ

ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆಸಿರುವ ಸೇನಾ ಪಡೆಗಳು, ಈಗಾಗಲೇ 9 ಸಾವಿರಕ್ಕೂ ಅಧಿಕ ನಾಗರಿಕರನ್ನು ಸ್ಥಳಾಂತರಿಸಲಾಗಿದ್ದು, ಇವರಿಗೆ  ಸೇನಾ ಶಿಬಿರಗಳು ಮತ್ತು ಸರ್ಕಾರಿ ಕಟ್ಟಡಗಳಲ್ಲಿ ಆಶ್ರಯ ನೀಡಲಾಗಿದೆ.

ಹಿನ್ನೆಲೆ

ಮೇಟಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಮಣಿಪುರ ರಾಜ್ಯದ ಜನಸಂಖ್ಯೆಯ ಶೇಕಡಾ 53 ರಷ್ಟಿರುವ ಬುಡಕಟ್ಟು ಜನಾಂಗದವರಲ್ಲದ ಮೇಟಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಅಖಿಲ ಬುಡಕಟ್ಟು ವಿದ್ಯಾರ್ಥಿ ಒಕ್ಕೂಟ ಮಣಿಪುರ (ಎಟಿಎಸ್‌ಯುಎಮ್‌) ಸಂಘಟನೆಯು ಬುಧವಾರ ರಾಜ್ಯದ ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿತ್ತು.

ಮೆರವಣಿಗೆಯ ವೇಳೆ ಹಿಂಸಾಚಾರ ಭುಗಿಲೆದ್ದಿತು. ಇದು ಅನೇಕ ಜಿಲ್ಲೆಗಳಲ್ಲಿ ಪ್ರತೀಕಾರದ ದಾಳಿಗೆ ಕಾರಣವಾಯಿತು, ಅಲ್ಲದೇ ರಾಜ್ಯದಾದ್ಯಂತ ಹಿಂಸಾಚಾರ ಉಲ್ಬಣಗೊಳ್ಳಲು ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...