ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಬಲಿ; ‘ಕಂಟೈನ್ಮೆಂಟ್ ಝೋನ್’ ಘೋಷಣೆ, ವೈದ್ಯರ ರಜೆ ರದ್ದು

Date:

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಈಗಾಗಲೇ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಕಂಟೈನ್ಮೆಂಟ್ ಝೋನ್ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಜೊತೆಗೆ ಎಲ್ಲಾ ವೈದ್ಯರುಗಳ ರಜೆಗಳನ್ನು ರದ್ದು ಮಾಡಲಾಗಿದೆ.

ಜಿಲ್ಲಾಡಳಿತ ಅಧಿಕಾರಿಗಳು ಗ್ರಾಮಕ್ಕೆ ಹೋಗುವ ಎಲ್ಲಾ ಮಾರ್ಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ. ಪಡಿತರದಿಂದ ಕುಡಿಯುವ ನೀರಿನವರೆಗೆ ಸೌಲಭ್ಯಗಳನ್ನು ಅಲ್ಲೇ ಒದಗಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇನ್ನು ನಿಗೂಢ ಕಾಯಿಲೆ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕ ಮತ್ತು ಖಾಸಗಿ ಸಭೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಅನಾರೋಗ್ಯದ ಕಾರಣವನ್ನು ಗುರುತಿಸಲು ಚಿಕಿತ್ಸೆ ನೀಡಲು ಮತ್ತು ಪರೀಕ್ಷೆಗಳನ್ನು ನಡೆಸಲು ವೈದ್ಯಕೀಯ ತಂಡಗಳನ್ನು ಗ್ರಾಮಗಳಿಗೆ ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

ಕೇಂದ್ರ ತಜ್ಞರ ತಂಡವು ಸಾವಿನ ಕಾರಣವನ್ನು ಪತ್ತೆಹಚ್ಚುವ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿ ಸುಮಾರು 200ಕ್ಕೂ ಅಧಿಕ ಮಂದಿಯ ಮಾದರಿಗಳನ್ನು ಪಡೆಯಲಾಗಿದೆ. ವಿವಿಧ ಸಂಸ್ಥೆಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಯಾವುದೇ ವ್ಯಕ್ತಿ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಬೇಕಾದರೆ ಮೊದಲು ಭದ್ರತಾ ತಪಾಸಣೆಗೆ ಒಳಪಡಬೇಕಾಗುತ್ತದೆ.

ಪರಿಸ್ಥಿತಿ ಹದಗೆಡದಂತೆ ನೋಡಿಕೊಳ್ಳಲು ಅರೆವೈದ್ಯರು ಮತ್ತು ದಾದಿಯರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ರೋಗಿಗಳ ಆರೋಗ್ಯ ಸ್ಥಿತಿ ಹದಗೆಟ್ಟರೆ ನಾವು ಅವರನ್ನು ರಾಜೌರಿಗೆ ಕರೆದೊಯ್ಯುತ್ತಿದ್ದೇವೆ. ವೈದ್ಯರು ಸಹ ಪರಿಸ್ಥಿತಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಕಾಯಿಲೆಯ ಬಗ್ಗೆ ಅರ್ಥಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ” ಎಂದು ವೈದ್ಯರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

“ಸುಮಾರು ಒಂದೂವರೆ ತಿಂಗಳ ಹಿಂದೆ ಈ ನಿಗೂಢ ಕಾಯಿಲೆ ಹರಡಲು ಪ್ರಾರಂಭಿಸಿದೆ. ಪೀಡಿತರ ಸಂಪರ್ಕಕ್ಕೆ ಬಂದ ಎಲ್ಲ ಜನರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗಿದೆ. ಆಡಳಿತ ತಂಡವು ಸರಿಯಾದ ಆರೈಕೆ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆಯೇ ಎಂದು ನೋಡಿಕೊಳ್ಳುತ್ತಿದೆ” ಎಂದು ಸ್ಥಳೀಯರಾದ ಶಾಫಿಲ್ ಚೌಧರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

ಪ್ರಸ್ತುತ, ಬುಧಾಲ್ ಗ್ರಾಮದ ಆರು ರೋಗಿಗಳು ರಾಜೌರಿಯಲ್ಲಿರುವ ಜಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ಶಾಸಕ ಬುಧಾಲ್ ಜಾವೈದ್ ಇಕ್ಬಾಲ್ ಅವರು ಯಾವುದೇ ತುರ್ತು ಪರಿಸ್ಥಿತಿಗಳಿಗೆ ಏರ್ ಆಂಬ್ಯುಲೆನ್ಸ್‌ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನು ಈ ನಿಗೂಢ ಕಾಯಿಲೆಯಲ್ಲಿ ಜನರು ಜ್ವರ, ಬೆವರುವುದು, ವಾಂತಿ, ನಿರ್ಜಲೀಕರಣ ಮತ್ತು ಪ್ರಜ್ಞೆ ಕಳೆದುಕೊಳ್ಳುವುದು ಸೇರಿದಂತೆ ಹಲವು ರೋಗ ಲಕ್ಷಣಗಳನ್ನು ಹೊಂದಿದ್ದಾರೆ. ಆರಂಭಿಕ ಪರೀಕ್ಷೆಗಳ ಹೊರತಾಗಿಯೂ, ಯಾವುದೇ ಬ್ಯಾಕ್ಟೀರಿಯಾ ಅಥವಾ ವೈರಲ್ ಸೋಂಕುಗಳು ಪತ್ತೆಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...