ನಾಗ್ಪುರ ಹಿಂಸಾಚಾರ | ವಿಎಚ್‌ಪಿ, ಬಜರಂಗ ದಳದ ಮುಖಂಡರೂ ಸೇರಿ 78 ಮಂದಿ ಬಂಧನ

Date:

ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕೆಂದು ಹಿಂದುತ್ವವಾದಿಗಳು ನಡೆಸಿದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆದಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ ‘ಕರ್ಫ್ಯೂ’ ವಿಧಿಸಲಾಗಿದೆ. ಅಲ್ಲದೆ, ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ, ಬಜರಂಗ ದಳದ ಮುಖಂಡರು, ಕಾರ್ಯಕರ್ತರು ಸೇರಿ ಒಟ್ಟು 78 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ನಡೆದ ಗಲಭೆಗೆ ಫಹೀಮ್ ಖಾನ್ (38) ರುವಾರಿ ಎಂದು ಪೊಲೀಸರು ಗುರುತಿಸಿದ್ದಾರೆ. ಆತನನ್ನು ಮಂಗಳವಾರ ಮುಂಜಾನೆ ಬಂಧಿಸಿದ್ದಾರೆ.

ಔರಂಗಜೇಬ್ ಸಮಾಧಿ ತೆರವಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಔರಂಗಬೇಜ್ ಪ್ರತಿಕೃತಿ ಮತ್ತು ಧಾರ್ಮಿಕ ಚಾದರ್ ಅನ್ನು ದಹಿಸಿದ್ದರು. ಧಾರ್ಮಿಕ ಭಾವನೆಗೆ ಹಿಂದುತ್ವವಾದಿಗಳು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ, ಮುಸ್ಲಿಂ ಮುಖಂಡರು ನಾಗ್ಪುರದ ಗಣೇಶಪೇಟೆ ಪೊಲೀಸ್ ಠಾಣೆಗೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಪೊಲೀಸರು ಆರೋಪಿಗಳಿಗೆ ನೀರಕ್ಷಣೆ ನೀಡುತ್ತಿದ್ದಾರೆ ಎಂದು ಆಪಾದಿಸುವ ಎರಡು ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಫಾಹೀಮ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನು. ಆತ ಹರಿಬಿಟ್ಟ ವಿಡಿಯೋಗಳ ಕಾರಣಕ್ಕಾಗಿಯೇ ಗಲಭೆ ಆರಂಭವಾಗಿದೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಈ ವರದಿ ಓದಿದ್ದೀರಾ?: ನಾಗ್ಪುರ ಹಿಂಸಾಚಾರ ಪೂರ್ವಯೋಜಿತ, ‘ಛಾವಾ’ ಚಿತ್ರದಿಂದಾಗಿ ಔರಂಗಜೇಬ್‌ ಮೇಲೆ ಆಕ್ರೋಶ: ಫಡ್ನವೀಸ್

ಗಲಭೆ ಸಂಬಂಧ ಗಣೇಶಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುವುದಕ್ಕೂ ಮುನ್ನವೇ ಬಜರಂಗದಳ ಮತ್ತು ವಿಎಚ್‌ಪಿಯ ಎಂಟು ಮಂದಿ ಆರೋಪಿಗಳು ಪೊಲೀಸರ ಎದುರು ಶರಣಾಗಿದ್ದಾರೆ. ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಉಳಿದಂತೆ 27 ಮಂದಿ ಹಿಂದುತ್ವವಾದಿ ಕಾರ್ಯಕರ್ತರು ಮತ್ತು ವಿವಿಧ ಸಮುದಾಯಗಳ 43 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಗ್ಪುರದಲ್ಲಿ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 1,200ಕ್ಕೂ ಹೆಚ್ಚು ಮಂದಿ ಷಾಮೀಲಾಗಿದ್ದಾರೆ. 1,500ಕ್ಕೂ ಹೆಚ್ಚು ಕಣ್ಗಾವಲು ಕ್ಯಾಮೆರಾಗಳು ವಿಫಲವಾದ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಮಾಡುವ ಪ್ರಯತ್ನಕ್ಕೆ ಹಿನ್ನಡೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...