ಚಲಿಸುತ್ತಿದ್ದಾಗಲೇ ಇಬ್ಭಾಗವಾದ ರೈಲು; ತಪ್ಪಿದ ಭಾರೀ ದುರಂತ

Date:

ಚಲಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲು ಕೊಂಡಿಯನ್ನು ಕಳಚಿಕೊಂಡು ಇಬ್ಭಾಗವಾಗಿರುವ ಘಟನೆ ಉತ್ತರ ಪ್ರದೇಶದ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಬಳಿ ನಡೆದಿದೆ. ಸದ್ಯ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎದುರಾಗಬಹುದಾಗಿದ್ದ ಭಾರೀ ಅವಘಡವೊಂದು ತಪ್ಪಿದೆ.

ದೀನ್ ದಯಾಳ್ ಜಂಕ್ಷನ್‌ನಿಂದ ಹೊರಟ ನಂದನ್ ಕಾನನ್ ಎಕ್ಸ್‌ಪ್ರೆಸ್‌ ರೈಲು, ಸ್ವಲ್ಪ ಸಮಯದಲ್ಲಿಯೇ ಇದ್ದಕ್ಕಿದ್ದಂತೆ ಎರಡು ಭಾಗಗಳಾಗಿ ಕಳಚಿಕೊಂಡಿದೆ. ಕಪ್ಲಿಂಗ್ ವೈಫಲ್ಯದಿಂದ ರೈಲು ಇಬ್ಭಾಗವಾಗಿದೆ ಎಂದು ಹೇಳಲಾಗಿದೆ.

ವರದಿಗಳ ಪ್ರಕಾರ, ದೆಹಲಿಯ ಆನಂದ್ ವಿಹಾರ್‌ನಿಂದ ಒಡಿಶಾದ ಪುರಿಗೆ ರೈಲು ಚಲಿಸುತ್ತಿತ್ತು. ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್‌ನಲ್ಲಿ ನಿಲುಗಡೆ ಹೊಂದಿತ್ತು. ಅಲ್ಲಿಂದ ಪ್ರಯಾಣವನ್ನು ಆರಂಭಿಸಿತ್ತು. ಸ್ವಲ್ಪ ಸಮಯ ಚಲಿಸಿದ ರೈಲಿನ ಸ್ಲೀಪರ್ ಕೋಚ್ (S4)ನ ಕಪ್ಲಿಂಗ್ ಕಳಚಿಕೊಂಡಿದ್ದು, ಬೋಗಿಗಳು ಸಂಪರ್ಕ ಕಡಿದುಕೊಂಡಿವೆ. ರೈಲು ಇಬ್ಭಾಗವಾದಾಗ ಭಾರೀ ದುರಂತ ಸಂಭವಿಸಬಹುದೆಂದು ಪ್ರಯಾಣಿಕರು ಆತಂಕಕೊಂಡಿದ್ದರು. ಸದ್ಯ, ಯಾವುದೇ ಗಂಭೀರ ಪರಿಣಾಮಗಳು ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯಿಂದ ಹೊರಟಿದ್ದ ರೈಲು ಮೂರು ಗಂಟೆಗಳಿಗಿಂತ ಹೆಚ್ಚು ತಡವಾಗಿ ಚಲಿಸುತ್ತಿತ್ತು. ಸೋಮವಾರ ರಾತ್ರಿ 9:30ರ ಸುಮಾರಿಗೆ ಡಿಡಿಯು ಜಂಕ್ಷನ್‌ನ ಪ್ಲಾಟ್‌ಫಾರ್ಮ್ ಸಂಖ್ಯೆ ಒಂದಕ್ಕೆ ಬಂದು, ಅಲ್ಲಿಂದ ಹೊರಟಿತ್ತು. ಜಂಕ್ಷನ್‌ನಿಂದ ಆರು ಕಿಲೋಮೀಟರ್ ಚಲಿಸಿದ್ದ ರೈಲು, ಎರಡು ಭಾಗಗಳಾಗಿ ಬೇರ್ಪಟ್ಟಿದೆ. ಪ್ರಯಾಣಿಕರು ಆಘಾತಕ್ಕೊಳಗಾಗಿದ್ದರು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

“ರೈಲು ಬೇರ್ಪಟ್ಟ ಕೂಡಲೇ ರೈಲ್ವೇ ಸಿಬ್ಬಂದಿಗಳು ತ್ವರಿತವಾಗಿ ಕಾರ್ಯಪ್ರವೃತ್ತರಾದರು. ಬೇರ್ಪಟ್ಟ ರೈಲಿನ ಭಾಗಗಳನ್ನು ಡಿಡಿಯು ಜಂಕ್ಷನ್‌ನ 7 ಮತ್ತು 8ನೇ ಪ್ಲಾಟ್‌ಫಾರ್ಮ್‌ಗಳಿಗೆ ಮರಳಿ ತಂದರು. ರೈಲನ್ನು ಮತ್ತೆ ಜೋಡಿಸಿ, ಅಗತ್ಯ ತಪಾಸಣೆ ಮತ್ತು ರಿಪೇರಿ ಕೆಲಸಗಳನ್ನು ಮುಗಿಸಿದ ಬಳಿಕ, ರಾತ್ರಿ 1:00 ಗಂಟೆಗೆ ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸಿತು” ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲು ಜೋಡಣೆ ವೈಫಲ್ಯದ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...