ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Date:

ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ  ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಬಿಜೆಪಿಯ ನರೇಂದ್ರ ಮೋದಿ ಅವರು 2014 ರಲ್ಲಿ ಎನ್‌ಡಿಎ ಒಕ್ಕೂಟದಿಂದ ಮೊದಲ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 2019ರಲ್ಲಿ ಎರಡನೇ ಬಾರಿ ಹಾಗೂ 2024 ರಲ್ಲಿ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

18ನೇ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 292 ಸ್ಥಾನ ಗಳಿಸಿದರೆ, ಇಂಡಿಯಾ ಒಕ್ಕೂಟ 235 ಸ್ಥಾನ ಪಡೆದು ಉತ್ತಮ ಪೈಪೋಟಿ ನೀಡಿತ್ತು. ಬಿಜೆಪಿ 240 ಸ್ಥಾನ ಪಡೆದಿರುವ ಕಾರಣ ಬಹುಮತಕ್ಕಾಗಿ ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳನ್ನು ಅವಲಂಭಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಜವಾಹರ್‌ ಲಾಲ್‌ ನೆಹರು ನಂತರ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೆಹರು 1947 ರಿಂದ 1962ರವರೆಗೂ 16 ವರ್ಷ 286 ದಿನಗಳ ಕಾಲ ಪ್ರಧಾನಿಯಾಗಿದ್ದರು. ಅದನ್ನು ಬಿಟ್ಟರೆ ಇಂದಿರಾ ಗಾಂಧಿ ಅವರು 11 ವರ್ಷ 59 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

ನರೇಂದ್ರ ಮೋದಿ ಜೊತೆಯಲ್ಲಿ  ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಮಿತ್‌ ಶಾ, ರಾಜನಾಥ್ ಸಿಂಗ್‌, ನಿರ್ಮಲಾ ಸೀತಾರಾಮನ್‌, ಜೆ ಪಿ ನಡ್ಡಾ, ನಿತಿನ್‌ ಗಡ್ಕರಿ, ಪಿಯೂಶ್ ಗೋಯಲ್‌ ಸೇರಿದಂತೆ 71 ನಾಯಕರು ಪ್ರಮಾಣ ವಚನ ಸ್ವೀಕರಿಸಿದ್ದರು.

ಕರ್ನಾಟಕದಿಂದ ಮಾಜಿ ಮುಖ್ಯ ಮಂತ್ರಿ ಜೆಡಿಎಸ್‌ನ ಕಾರ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ, ಪ್ರಲ್ಹಾದ್‌ ಜೋಷಿ, ವಿ ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯೆ ನಿರ್ಮಲಾ ಸೀತಾರಾಮನ್‌ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ ಎಸ್‌ ಯಡಿಯೂರಪ್ಪ, ಮುರುಳಿ ಮನೋಹರ್ ಜೋಷಿ, ಚಿತ್ರ ನಟರಾದ ರಜಿನಿಕಾಂತ್‌, ಉದ್ಯಮಿಗಳಾದ ಮುಖೇಶ್ ಅಂಬಾನಿ, ಸಾರ್ಕ್‌ ಒಕ್ಕೂಟದ ರಾಷ್ಟ್ರಗಳಾದ ಶ್ರೀಲಂಕಾ, ಭೂತಾನ್‌, ನೇಪಾಳ, ಮಾಲ್ಡೀವ್ಸ್ ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...