ಇಂದು ಮೋದಿ ಪ್ರಮಾಣ ವಚನ ಸ್ವೀಕಾರ: ಯಾರೆಲ್ಲ ಆಹ್ವಾನಿತರು?

Date:

ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಸಚಿವ ಸಂಪುಟವು ಕೂಡಾ ಪ್ರಮಾಣ ವಚನ ಸ್ವೀಕರಲಿಸಲಿದೆ. ಈ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ.

ಇಂದು ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಹಲವಾರು ನಾಯಕರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಮತ್ತು ಸಮಾರಂಭದಲ್ಲಿ ಭಾಗವಹಿಸಲು ಭಾನುವಾರ ನವದೆಹಲಿಗೆ ಆಗಮಿಸಲಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಜರಾತಿ ಖಚಿತಪಡಿಸಿದ ನಾಯಕರು

ಶ್ರೀಲಂಕಾದ ಅಧ್ಯಕ್ಷ ಎಚ್.ಇ. ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಎಚ್.ಇ. ಡಾ ಮೊಹಮ್ಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಎಚ್.ಇ. ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಎಚ್.ಇ. ಶೇಖ್ ಹಸೀನಾ, ಮಾರಿಷಸ್‌ನ ಪ್ರಧಾನ ಮಂತ್ರಿ ಎಚ್.ಇ. ಪ್ರವಿಂದ್ ಕುಮಾರ್ ಜುಗ್ನಾಥ್, ನೇಪಾಳದ ಪ್ರಧಾನಿ ಎಚ್.ಇ. ಪುಷ್ಪ ಕಮಲ್ ದಹಾಲ್ ‘ಪ್ರಚಂಡ’, ಭೂತಾನ್ ಪ್ರಧಾನಿ ಎಚ್.ಇ. ತ್ಶೆರಿಂಗ್ ಟೋಬ್ಗೇ ಹಾಜರಾತಿ ಖಚಿತಪಡಿಸಿದ್ದಾರೆ.

ಸಾರ್ಕ್ (ಸೌತ್ ಏಷ್ಯನ್ ಅಸೋಸಿಯೇಷನ್ ​​ಫಾರ್ ರೀಜನಲ್ ಕೋಆಪರೇಷನ್) ನಾಯಕರು ಕಾರ್ಯಕ್ರಮಕ್ಕೆ ಹಾಜರಾಗಲು ತಯಾರಿ ನಡೆಸುತ್ತಿದ್ದು ರಾಷ್ಟ್ರ ರಾಜಧಾನಿ ಭಾನುವಾರ ಹೈ ಅಲರ್ಟ್ ಆಗಿರುತ್ತದೆ ಎಂದು ದೆಹಲಿ ಪೊಲೀಸರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜ್ ಮತ್ತು ಒಬೆರಾಯ್‌ನಂತಹ ಪ್ರಮುಖ ಹೋಟೆಲ್‌ಗಳಲ್ಲಿ ಭಿಗಿ ಭದ್ರತೆಯಿದೆ. ಗಣ್ಯರ ಪ್ರಯಾಣಕ್ಕೆ ಸುರಕ್ಷಿತ ಮಾರ್ಗವನ್ನು ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಇಂದೇ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔತಣ ಕೂಟದಲ್ಲಿ ಈ ನಾಯಕರು ಭಾಗವಹಿಸಲಿದ್ದಾರೆ.

ಎಎನ್‌ಐ ಪ್ರಕಾರ ಸಂಸತ್ತಿನ ನಿರ್ಮಾಣದಲ್ಲಿ ತೊಡಗಿರುವ ಸುಮಾರು 250 ಕಾರ್ಮಿಕರು ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಮಿಕರು ಮೊದಲು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ನಾಯಕ ಮನ್ಸುಖ್ ಮಾಂಡವಿಯಾ ಅವರ ನಿವಾಸಕ್ಕೆ ಬಂದು ಬಳಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ.

ವಿಪಕ್ಷ ನಾಯಕರಿಗೆ ಆಹ್ವಾನದ ಈ ಬಗ್ಗೆ ಎಎನ್‌ಐಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, “ಪ್ರಮಾಣ ವಚನ ಸಮಾರಂಭಕ್ಕೆ ವಿದೇಶಿ ನಾಯಕರನ್ನು ಮಾತ್ರ ಆಹ್ವಾನಿಸಲಾಗಿದೆ. ನಮ್ಮ ನಾಯಕರಿಗೆ ಇನ್ನೂ ಆಹ್ವಾನ ಬಂದಿಲ್ಲ. ನಮ್ಮ ಇಂಡಿಯಾ ಒಕ್ಕೂಟಕ್ಕೆ ಆಹ್ವಾನ ಬಂದಾಗ ನಾವು ಹಾಜರಾಗುವ ಬಗ್ಗೆ ಯೋಚಿಸುತ್ತೇವೆ” ಎಂದು ತಿಳಿಸಿದ್ದರು.

ಅದಾದ ಬಳಿಕ ನಿನ್ನೆ ಸಂಜೆ ವೇಳೆಗೆ ವಿಪಕ್ಷ ನಾಯಕರಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಯಾಗಿದೆ. ಆದರೆ ಇಂದು ಸಭೆ ಸೇರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರು ನಿರ್ಧರಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...