ಸಾವರ್ಕರ್ ಕುರಿತು ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Date:

2022ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ಹೇಳಿಕೆ ನೀಡಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ ಕ್ರಿಮಿನಲ್ ನ್ಯಾಯಾಲಯವು ರದ್ದುಗೊಳಿಸಿದೆ.

2022ರ ಜೂನ್ 15, 16ರಂದು ಹಿಂಗೋಲಿ ಮತ್ತು ಅಕೋಲ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಸಾವರ್ಕರ್ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಾಸಿಕ್ ಮೂಲದ ನಿರ್ಭಯಾ ಫೌಂಡೇಶನ್‌ನ ಅಧ್ಯಕ್ಷ ದೇವೇಂದ್ರ ಭೂತಾಡ ಅವರು ದೂರು ದಾಖಲಿಸಿದ್ದರು.

ಇದನ್ನು ಓದಿದ್ದೀರಾ? ಸಾವರ್ಕರ್‌ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂತಾಡ ದೂರಿನ ಆಧಾರದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಾಸಿಕ್ ನ್ಯಾಯಾಲಯವು 2024ರ ಸೆಪ್ಟೆಂಬರ್‌ನಲ್ಲಿ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿತ್ತು.

ಅದಾದ ಬಳಿಕ ರಾಹುಲ್ ಅವರಿಗೆ ಜಾಮೀನು ನೀಡಲಾಗಿದೆ. ವರ್ಚುವಲ್ ಆಗಿ ಆನ್‌ಲೈನ್ ಮೂಲಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಲಾಗಿತ್ತು. ಈ ವೇಳೆ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ರಾಹುಲ್ ವಾದಿಸಿದ್ದಾರೆ. ಅದಾದ ಬಳಿಕ 2024ರ ಸೆಪ್ಟೆಂಬರ್‌ನಲ್ಲೇ ಕೋರ್ಟ್ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ತನಿಖೆಗೆ ಆದೇಶಿಸಿತ್ತು.

ಪೊಲೀಸರು ವರದಿ ಸಲ್ಲಿಸಿದ ಬಳಿಕ ದೂರುದಾರರು ಪ್ರಕರಣವನ್ನು ಹಿಂಪಡೆಯಲು ಮುಂದಾಗಿದ್ದು ಈ ಹಿನ್ನೆಲೆ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ರದ್ದುಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...