ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ಕೋರ್ಟ್ ನಕಾರ

Date:

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಮತ್ತು ಸೋನಿಯಾ ಇಬ್ಬರಿಗೂ ನೋಟಿಸ್ ನೀಡಬೇಕು ಎಂದು ವಿಶೇಷ ನ್ಯಾಯಾಲಯದ ಮುಂದೆ ಜಾರಿ ನಿರ್ದೇಶನಾಲಯ ಮನವಿ ಮಾಡಿದೆ. ಆದರೆ ಸದ್ಯಕ್ಕೆ ನೋಟಿಸ್ ನೀಡಲಾಗದು ಎಂದು ದೆಹಲಿ ಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ರಾಹುಲ್- ಸೋನಿಯಾ ಗಾಂಧಿ ವಿರುದ್ಧದ ಆರೋಪವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಟಿಸ್ ನೀಡುವುದು ಮುಖ್ಯ ಎಂದು ನ್ಯಾಯಾಲಯಕ್ಕೆ ಅನಿಸುವವರೆಗೂ ಅಂತಹ ಆದೇಶವನ್ನು ನೀಡಲಾಗದು ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಚಾರ್ಜ್‌ಶೀಟ್‌ನಲ್ಲಿ ಕೆಲವು ಮಾಹಿತಿಗಳಿಲ್ಲ. ಈ ದಾಖಲೆಗಳನ್ನು ಒದಗಿಸುವಂತೆ ನಾವು ಇಡಿಗೆ ತಿಳಿಸಿದ್ದೇವೆ. ಅದಾದ ಬಳಿಕವೇ ಕೋರ್ಟ್ ನೋಟಿಸ್ ನೀಡುತ್ತದೆ” ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿಕೆ ಮಾಡಿದೆ.

ಏನಿದು ನಾಷ್ಯನಲ್ ಹೆರಾಲ್ಡ್ ಪ್ರಕರಣ?

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಮತ್ತು ಸೋನಿಯಾ, ರಾಹುಲ್ ಗಾಂಧಿಯವರ ತೆರಿಗೆ ಮೌಲ್ಯಮಾಪನ ಕೋರಿ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ 2013ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದಾಯ ತೆರಿಗೆ ಇಲಾಖೆಗೆ ಅವಕಾಶ ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಆಧರಿಸಿ ಇಡಿ ಪ್ರಕರಣವನ್ನು ದಾಖಲಿಸಿಕೊಂಡಿದೆ.

ಈ ಪತ್ರಿಕೆಯನ್ನು ಗಾಂಧೀ ಕುಟುಂಬ ವಂಚನೆಯಿಂದ ಸ್ವಾಧೀನಪಡಿಸಿಕೊಂಡಿದೆ ಮತ್ತು ಹಣ ದುರುಪಯೋಗ ಮಾಡಿದೆ ಎಂಬುದು ಸ್ವಾಮಿ ಅವರ ಆರೋಪ. ಗಾಂಧಿ ಕುಟುಂಬವು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್). ಗಾಂಧೀ ಕುಟುಂಬ ಈ ಸಂಸ್ಥೆಯನ್ನು ಖರೀದಿಸುವ ಮೂಲಕ ಅದರ ಆಸ್ತಿಪಾಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. ಶೇಕಡ 86ರಷ್ಟು ಷೇರುಗಳು ಗಾಂಧಿ ಕುಟುಂಬದ ನಿಯಂತ್ರಣದಲ್ಲಿವೆ ಎಂದು ಸ್ವಾಮಿ ದೂರಿದ್ದಾರೆ.

ಇದನ್ನು ಓದಿದ್ದೀರಾ? ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

2015ರ ಡಿಸೆಂಬರ್ 19ರಂದು ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ಸೋನಿಯಾ ಮತ್ತು ರಾಹುಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತು. ಇವರಿಬ್ಬರ ಸಂಸ್ಥೆಯಾದ ವೈಐ ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಮೌಲ್ಯದ ಸಂಸ್ಥೆಯನ್ನು ಬರೀ 50 ಲಕ್ಷ ರೂಪಾಯಿಗೆ ತನ್ನದಾಗಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ಆದರೆ ನ್ಯಾಷನಲ್ ಹೆರಾಲ್ಡ್ ಅನ್ನು ಪುನರುಜ್ಜೀವನಗೊಳಿಸುವುದು ಮತ್ತು ಅದರ ಪರಂಪರೆಯನ್ನು ರಕ್ಷಿಸುವುದು ನಮ್ಮ ಗುರಿಯಾಗಿತ್ತೇ ಹೊರತು ರಿಯಲ್ ಎಸ್ಟೇಟ್‌ನಿಂದ ಲಾಭ ಗಳಿಸುವುದಲ್ಲ ಎಂಬುದು ಕಾಂಗ್ರೆಸ್‌ನ ವಾದವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...