ಮದ್ಯದ ಬಾಟಲಿಗಳಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡುವುದು ಎಲ್ಲಾ ದೇಶಗಳಲ್ಲಿ ಕಡ್ಡಾಯವಾಗಬೇಕು: ಲಾನ್ಸೆಟ್

Date:

ವಿಶ್ವದಲ್ಲಿ ಬರೀ ಮೂರನೇ ಒಂದು ಬಾಗದಷ್ಟು ದೇಶಗಳಲ್ಲಿ ಮಾತ್ರ ‘ ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ’ ಎಂಬ ಲೇಬಲ್ ಅನ್ನು ಮದ್ಯದ ಬಾಟಲಿಗಳಲ್ಲಿ ಹಾಕಲಾಗಿರುತ್ತದೆ. ಎಲ್ಲಾ ದೇಶಗಳಲ್ಲಿ ಈ ಲೇಬಲ್ ಕಡ್ಡಾಯಗೊಳಿಸುವ ಅಗತ್ಯವಿದೆ ಎಂದು ಲಾನ್ಸೆಟ್ ತನ್ನ ಇತ್ತೀಚಿನ ಸಂಶೋಧನಾ ವರದಿಯಲ್ಲಿ ತಿಳಿಸಿದೆ.

ಮದ್ಯಪಾನ ಸೇವನೆ ಮಾಡುವುದರಿಂದ ಕ್ಯಾನ್ಸರ್, ಯಕೃತ್ತಿಗೆ ಹಾನಿ, ಮೊದಲಾದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವುದರಿಂದ ಅದೆಷ್ಟೋ ರಸ್ತೆ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ ಮದ್ಯಪಾನ ಮಾಡುವುದರಿಂದಾಗುವ ಆರೋಗ್ಯ ಸಮಸ್ಯೆ ಬಗ್ಗೆ ಬಾಟಲಿಗಳ ಮೂಲಕವೇ ಎಚ್ಚರಿಕೆ ಸಂದೇಶ ನೀಡುವ ಅಗತ್ಯವಿದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮದ್ಯ ಕುಡಿದು ಶಾಲೆಯಲ್ಲಿ ಮಲಗಿದ್ದ ಮುಖ್ಯಶಿಕ್ಷಕ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ಯಪಾನದಿಂದ ಉಂಟಾಗುವ ಆರೋಗ್ಯ, ಇತರೆ ಸಮಸ್ಯೆಗಳು ಅತೀ ಹೆಚ್ಚು ಕಾಳಜಿ ವಹಿಸಬೇಕಾಗಿರುವುದು. ಆಗ್ನೇಯ ಏಷ್ಯಾದಲ್ಲಿ ಈ ಬಗ್ಗೆ ಅಧಿಕ ಎಚ್ಚರಿಕೆ ನೀಡುವ ಅಗತ್ಯವಿದೆ. ಈಗಾಗಲೇ ಈ ಭಾಗದಲ್ಲಿ ಮದ್ಯ ಸೇವನೆ ಹೆಚ್ಚಾಗುತ್ತಿದ್ದು, ಇನ್ನಷ್ಟು ಅಧಿಕವಾಗುವ ಆತಂಕವಿದೆ ಎಂದು ತಿಳಿಸಿದೆ.

ಈ ಸಂಶೋಧನೆಯಲ್ಲಿ ಭಾಗಿಯಾಗಿರುವ ಡಾ ಯಾತನ್ ಪಾಲ್ ಸಿಂಗ್ ಬಲ್ಹಾರ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಭಾರತದಲ್ಲಿ ಮದ್ಯದ ಬಾಟಲಿಗಳಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡಲಾಗುತ್ತದೆ. ಜಾಹೀರಾತಿನಲ್ಲೂ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡಲಾಗುತ್ತದೆ. ಆದರೆ ಗರ್ಭಿಣಿಯರು, ಬಾಲಕರು ಮದ್ಯಪಾನ ಮಾಡುವುದರಿಂದಾಗುವ ಆರೋಗ್ಯ ಸಮಸ್ಯೆ ಬಗ್ಗೆ ಎಚ್ಚರಿಕೆ ನೀಡಿಲ್ಲ. ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಎಚ್ಚರಿಕೆ ನೀಡಿಲ್ಲ” ಎಂದು ಹೇಳಿದ್ದಾರೆ.

ಇನ್ನು ಭಾರತದಲ್ಲಿ ಮದ್ಯದ ಬಾಟಲಿಗಳಲ್ಲಿ “ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಮದ್ಯ ಸೇವಿಸಿ ವಾಹನ ಚಲಾಯಿಸುವುದು ಸುರಕ್ಷಿತವಲ್ಲ” ಎಂಬ ಲೇಬಲ್ ಹಾಕುವುದು ಕಡ್ಡಾಯವಾಗಿದೆ. ಆದರೆ ಗರ್ಭಿಣಿಯರಿಗೆ ಸಂಬಂಧಿಸಿದ ಯಾವುದೇ ಎಚ್ಚರಿಕೆಯು ಲೇಬಲ್‌ನಲ್ಲಿ ಇರುವುದಿಲ್ಲ. ಸಿನಿಮಾಗಳಲ್ಲಿಯೂ ಮದ್ಯ ಸೇವನೆ ದೃಶ್ಯದ ವೇಳೆ ಎಚ್ಚರಿಕೆ ಸಂದೇಶ ಹಾಕುವುದು ಕಡ್ಡಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...