ಇ-ಮಾಧ್ಯಮ ನಿಯಂತ್ರಣ ಸಂಸ್ಥೆಯ ಅಗತ್ಯವಿದೆ: ಸುಪ್ರೀಂ ಕೋರ್ಟ್ ನ್ಯಾ. ನಾಗರತ್ನ

Date:

  • ಸುಳ್ಳು ಸುದ್ದಿ ಲಕ್ಷಾಂತರ ಜನರ ದಾರಿತಪ್ಪಿಸಬಲ್ಲದು
  • ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವ್ಯತಿರಿಕ್ತವಾಗಿದೆ

ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಸ್ವಯಂ ನಿಯಂತ್ರಣ ಹಾಕಲು ಸಾಧ್ಯವಿಲ್ಲ. ಅದಕ್ಕಾಗಿ ಇ-ಮಾಧ್ಯಮ ನಿಯಂತ್ರಣ ಸಂಸ್ಥೆ (ರೆಗ್ಯೂಲೇಟರಿ ಬಾಡಿ)ಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ವಿ ನಾಗರತ್ನ ಪ್ರತಿಪಾದಿಸಿದ್ದಾರೆ.

ನವದೆಹಲಿಯಲ್ಲಿ ಆಯೋಜಿಸಿದ್ದ ಬಿಸಿನೆಸ್ ಸ್ಟ್ಯಾಂಡರ್ಡ್ ಸೀಮಾ ನಜರೆತ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಮುಕ್ತ ಮತ್ತು ಸಮತೋಲಿತ ಮಾಧ್ಯಮ – ಪ್ರಜಾಪ್ರಭುತ್ವದ ಕಾವಲುಗಾರ’ ವಿಷಯದ ಕುರಿತು ಅವರು ಮಾತನಾಡಿದರು. “ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡಿಕೊಂಡೇ ಮಾಧ್ಯಮಗಳ ವಿರುದ್ಧದ ದೂರನ್ನು ನಿರ್ವಹಿಸುವ ವ್ಯವಸ್ಥೆ ಜಾರಿಗೆ ಬರಬೇಕಾಗಿದೆ” ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿ, ಪೀತ ಪತ್ರಿಕೋದ್ಯಮ ಹಾಗೂ ಮಾಧ್ಯಮಗಳಿಂದ ಭೀತಿ ಉಂಟಾಗುವ ಸಾಧ್ಯತೆ ಇದೆ. ಸುಳ್ಳು ಸುದ್ದಿ ಲಕ್ಷಾಂತರ ಜನರನ್ನು ಒಂದು ಕ್ಷಣಕ್ಕೆ ದಾರಿತಪ್ಪಿಸಬಲ್ಲದು. ಇದು ನಮ್ಮ ಅಸ್ತಿತ್ವಕ್ಕೆ ಬುನಾದಿ ಹಾಕುವ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವ್ಯತಿರಿಕ್ತವಾಗಿದೆ ಎಂಬುದನ್ನು ಮರೆಯಬಾರದು ಎಂದು ಜಸ್ಟಿಸ್ ನಾಗರತ್ನ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೆಹಲಿ | ಜಂತರ್‌ಮಂತರ್‌ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಿಕ್ಕಾಟ

ಒಂದು ದೇಶ ಪ್ರಜಾಸತ್ತಾತ್ಮಕವಾಗಿ ಉಳಿಯಬೇಕಾದರೆ, ಮಾಧ್ಯಮಗಳು ನಿಜವಾದ ಅರ್ಥದಲ್ಲಿ ಮುಕ್ತ ಮತ್ತು ನಿರ್ಭೀತವಾಗಿರಬೇಕು, ಪಾರದರ್ಶಕವಾಗಿರಬೇಕು ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...