ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಹಾರ ಮಾತ್ರವಲ್ಲ ಮಹಾರಾಷ್ಟ್ರಕ್ಕೂ ‘ಲಿಂಕ್’

Date:

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಇಬ್ಬರು ಶಿಕ್ಷಕರನ್ನು ವಿಚಾರಣೆ ಒಳಪಡಿಸಿದ್ದಾರೆ. ಬಿಹಾರ ಮಾತ್ರವಲ್ಲ ಮಹಾರಾಷ್ಟ್ರದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ಇದೀಗ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಶಿಕ್ಷಕ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮಾರ್ಖಾನ್ ಪಠಾಣ್ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿತ್ತು. ಅವರಿಬ್ಬರನ್ನೂ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತ್ತು. ಅವರು ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಬೋಧಿಸುತ್ತಿದ್ದರು. ಜೊತೆಗೆ, ಲಾತೂರ್‌ನಲ್ಲಿ ಖಾಸಗಿ ಕೋಚಿಂಗ್ ಸೆಂಟರ್‌ಗಳನ್ನು ನಡೆಸುತ್ತಿದ್ದರು ಎಂದು ವರದಿಯಾಗಿದೆ.

ಹಲವಾರು ಗಂಟೆಗಳ ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದರೆ ಮತ್ತೆ ಕರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀಟ್ ಮತ್ತು ನೆಟ್‌ ರಾಷ್ಟ್ರೀಯ ಪರೀಕ್ಷೆಗಳು ಮತ್ತು ಅವುಗಳಲ್ಲಿ ಅಕ್ರಮಗಳು ಭಾರತೀಯ ಶೈಕ್ಷಣಿಕ ಮತ್ತು ರಾಜಕೀಯ ವಲಯವನ್ನು ಬೆಚ್ಚಿಬೀಳಿಸಿವೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ನೀಟ್ ಪರೀಕ್ಷೆ ನಡೆದ ದಿನದ ಹಿಂದಿನ ರಾತ್ರಿ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದ್ದಾಗಿ ಒಪ್ಪಿಕೊಂಡ ನಾಲ್ವರನ್ನು ಬಿಹಾರ ಪೊಲೀಸರು ಈ ಹಿಂದೆ ಬಂಧಿಸಿದ್ದರು. ಸೋರಿಕೆಯಾದ ಪರೀಕ್ಷಾ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಮತ್ತು ಅಭ್ಯರ್ಥಿಗಳಿಗೆ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಪ್ರಾಕ್ಸಿ ಅಭ್ಯರ್ಥಿಗಳನ್ನು ಒದಗಿಸುವಲ್ಲಿ ‘ಸಾಲ್ವರ್ ಗ್ಯಾಂಗ್’ಗಳ ಸಕ್ರಿಯವಾಗಿದ್ದವು ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೇ 5ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ 4ರಂದು ಫಲಿತಾಂಶ ಪ್ರಕಟವಾಗಿತ್ತು. ಬಳಿಕ, ನೀಟ್ ಅಕ್ರಮದ ಬಗ್ಗೆ ಭಾರೀ ಆರೋಪಗಳು ಕೇಳಿಬಂದವು. ಪತ್ರಿಕೆ ಸೋರಿಕೆ ಮತ್ತು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗಿದೆ ಎಂಬ ಆರೋಪಗಳು ದೇಶದ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ.

ಪ್ರತಿಭಟನೆ ಮತ್ತು ಸುಪ್ರೀಂ ಛಾಟಿಯ ಬಳಿಕ ಗ್ರೇಸ್‌ ಅಂಕ ಪಡೆದ 1,500 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ನೀಟ್ ಅಕ್ರಮದ ಬೆನ್ನಲ್ಲೇ ನೆಟ್‌ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...