ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪಾಟ್ನಾದಲ್ಲಿ ಇಬ್ಬರ ಬಂಧಿಸಿದ ಸಿಬಿಐ

Date:

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಬಂಧನವನ್ನು ಮಾಡಿದೆ. ಪಾಟ್ನಾದಲ್ಲಿ ವಿಚಾರಣೆಗೆ ಕರೆದ ಬಳಿಕ ಆರೋಪಿಗಳಾದ ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಕುಮಾರ್ ಅವರನ್ನು ಬಂಧಿಸಿದೆ.

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಪ್ರಕರಣವು ರಾಷ್ಟ್ರವ್ಯಾಪಿ ಕೋಲಾಹಲ ಸೃಷ್ಟಿಸಿದ್ದು, ಪ್ರತಿಪಕ್ಷಗಳು ಸಂಸತ್ತಿನ ಹೊರಗೆ ಈ ವಿಷಯವನ್ನು ಪ್ರಸ್ತಾಪಿಸಿವೆ. ಈ ನಡುವೆ ಇಬ್ಬರನ್ನು ಬಂಧಿಸಲಾಗಿದೆ.

ನೀಟ್ ಪೇಪರ್ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಮನೀಶ್ ಪ್ರಕಾಶ್ ಒಬ್ಬನಾಗಿದ್ದಾನೆ. ಮನೀಶ್ ಪ್ರಕಾಶ್ ನೀಟ್ ಪರೀಕ್ಷೆಗೆ ಒಂದು ದಿನಕ್ಕೂ ಮುಂಚೆ ಪರೀಕ್ಷೆಯ ಅಭ್ಯರ್ಥಿಗಳಿಗೆ ತನ್ನ ಸ್ನೇಹಿತ ಅಶುತೋಷ್ ಮೂಲಕ ಶಾಲೆಯೊಂದನ್ನು (Learn and Play School) ಬುಕ್ಕಿಂಗ್ ಮಾಡಿದ್ದರು ಎಂಬ ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಗದಗ | ನೀಟ್-ಯುಜಿಸಿ ಪರೀಕ್ಷೆ ಭ್ರಷ್ಟಾಚಾರ ಹಗರಣ; ನ್ಯಾಯಕ್ಕಾಗಿ ಎಸ್ಎಫ್ಐ ಆಗ್ರಹ

ಪಾಟ್ನಾದ ಖೇಮ್ನಿ ಚಾಕ್‌ನಲ್ಲಿರುವ ಲರ್ನ್ ಅಂಡ್ ಪ್ಲೇ ಸ್ಕೂಲ್‌ನಲ್ಲಿ ಅರ್ಧ ಸುಟ್ಟ ನೀಟ್ ಪ್ರಶ್ನೆಪತ್ರಿಕೆ ಪತ್ತೆಯಾಗಿದ್ದು, ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಸಾಕ್ಷ್ಯಗಳಲ್ಲಿ ಇದು ಒಂದಾಗಿದೆ. ಮನೀಶ್ ಪ್ರಕಾಶ್ ಈ ಶಾಲೆಯನ್ನು ಒಂದು ರಾತ್ರಿಗೆ ಬುಕ್ಕಿಂಗ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಸಿಬಿಐ ಇಬ್ಬರು ಶಂಕಿತ ಆರೋಪಿಗಳಾದ ಚಿಂಟು ಮತ್ತು ಮುಖೇಶ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಅವರನ್ನು ಬ್ಯೂರ್ ಜೈಲಿನಿಂದ ಸ್ಥಳಾಂತರಿಸಲಾಗಿದ್ದು, ಸಿಬಿಐ ಕಚೇರಿಗೆ ಕರೆದೊಯ್ಯುವ ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ವಾರದ ಆರಂಭದಲ್ಲಿ ಸಿಬಿಐ ಆರೋಪಿಗಳಾದ ಚಿಂಟು ಮತ್ತು ಮುಖೇಶ್‌ ಅವರನ್ನು ಏಳು ದಿನಗಳ ವಶಕ್ಕೆ ಪಡೆದುಕೊಂಡಿದೆ. ಎರಡು ಸಿಬಿಐ ತಂಡಗಳನ್ನು ನಳಂದಾ ಮತ್ತು ಸಮಸ್ತಿಪುರದಲ್ಲಿ, ಇನ್ನೊಂದು ತಂಡವನ್ನು ಹಜಾರಿಬಾಗ್‌ನಲ್ಲಿ ನಿಯೋಜಿಸಲಾಗಿದೆ. ಓಯಸಿಸ್ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಎಂಟು ಮಂದಿಯನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...