ನೀಟ್ | ಬಿಜೆಪಿ ಆಡಳಿತ ರಾಜ್ಯಗಳಿಂದ ಸಂಘಟಿತ ಭ್ರಷ್ಟಾಚಾರ; ಜೂ.21 ರಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

Date:

ನೀಟ್‌ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಘಟಕಗಳು ಜೂನ್‌ 21ರಂದು ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

“ತಾಂತ್ರಿಕ ದೋಷಗಳು, ಅಕ್ರಮಗಳು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯು ನಲುಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದಿದ್ದು, ಬಿಹಾರ, ಗುಜರಾತ್ ಹಾಗೂ ಹರಿಯಾಣ ಕೇಂದ್ರಗಳಿಂದ ಸಂಘಟಿತ ಅಪರಾಧ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವೇಣುಗೋಪಾಲ್‌ ತಿಳಿಸಿದ್ದಾರೆ.

“ಈ ಅಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ನಿರ್ಲಕ್ಷ್ಯತೆಯನ್ನು ಕೊನೆಗಾಣಿಸುವಂತೆ ಸೂಚನೆ ನೀಡಿದೆ. ಇಂತಹ ಅಕ್ರಮಗಳು ಪರೀಕ್ಷೆಯ ಪಾರದರ್ಶಕತೆಯ ಮೇಲೆ ಪರಿಣಾಮ ಬೀರಲಿದ್ದು, ಭವಿಷ್ಯದಲ್ಲಿ ಅಸಂಖ್ಯಾತ ನಿಷ್ಠಾವಂತ ವಿದ್ಯಾರ್ಥಿಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ. ನಮ್ಮ ಪ್ರಣಾಳಿಕೆಯು ಪ್ರಶ್ನೆ ಪತ್ರಿಕೆಯ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಂಡು ಯುವಕರ ಭವಿಷ್ಯವನ್ನು ರಕ್ಷಿಸಲು ಭರವಸೆ ನೀಡುತ್ತದೆ” ಎಂದು ವೇಣುಗೋಪಾಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ನೀಟ್‌ ಪರೀಕ್ಷೆಯಲ್ಲಿನ ಬೃಹತ್‌ ಭ್ರಷ್ಟಾಚಾರ, ಅಕ್ರಮಗಳು ಹಾಗೂ ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿರುವ ಎನ್‌ಡಿಎ ಸರ್ಕಾರದ ವಿರುದ್ಧ ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿಗಳು ತಮ್ಮ ರಾಜ್ಯಗಳ ಮುಖ್ಯ ಕಚೇರಿಗಳಲ್ಲಿ ಜೂನ್‌ 21 ರಂದು ಪಕ್ಷದ ಹಿರಿಯ ನಾಯರೊಂದಿಗೆ ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಬೃಹತ್‌ ಪ್ರತಿಭಟನೆ ನಡೆಸುವಂತೆ ಮನವಿ ಮಾಡಲಾಗಿದೆ” ಎಂದು ವೇಣುಗೋಪಾಲ್‌ ತಿಳಿಸಿದ್ದಾರೆ.

ಮೇ 5 ರಂದು ಹಮ್ಮಿಕೊಳ್ಳಲಾಗಿದ್ದ ನೀಟ್‌ ಪರೀಕ್ಷೆಯಲ್ಲಿ ದೇಶಾದ್ಯಂತ 571 ಕೇಂದ್ರಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಎನ್‌ಟಿಎ ಇತಿಹಾಸದಲ್ಲಿಯೆ ಮೊದಲ ಬಾರಿಗೆ 67ಕ್ಕೂ ಹೆಚ್ಚು ವಿದ್ಯಾರ್ಥಿಗಳು 720 ಕ್ಕೆ 720 ಅಂಕ ಪಡೆದುಕೊಂಡಿದ್ದರು. ಈ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹರಿಯಾಣದ ಫರಿದಾಬಾದ್‌ ಪರೀಕ್ಷಾ ಕೇಂದ್ರದಲ್ಲಿ ಬರೆದ ವಿದ್ಯಾರ್ಥಿಗಳಾಗಿದ್ದರು.

ಪ್ರಶ್ನೆಪತ್ರಿಕೆ ಸೋರಿಕೆ, ಇತರೆ ಆರೋಪಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಎನ್‌ಟಿಎಗೆ ನಿರ್ದೇಶಿಸಿದೆ. ಇದಕ್ಕೂ ಮೊದಲು 10 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 8 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಈ ನಡುವೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಿಡಲಾಗಿದ್ದ ಕೃಪಾಂಕವನ್ನು ಎನ್‌ಟಿಎ ರದ್ದುಗೊಳಿಸಿ, ಮರು ಪರೀಕ್ಷೆಯನ್ನು ಕೈಗೊಳ್ಳಲು ತೀರ್ಮಾನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...