ಉತ್ತರ ಪ್ರದೇಶ | ‘ಜೀವನದಲ್ಲಿ ಏನಾದರೂ ಮಾಡಿ, ಮದುವೆ ಮಾತ್ರ ಆಗಬೇಡಿ’ ಎಂದು ಹೇಳಿ ವ್ಯಕ್ತಿ ಆತ್ಮಹತ್ಯೆ!

Date:

“ಜೀವನದಲ್ಲಿ ನೀವು ಏನಾದರೂ ಮಾಡಿ, ಮದುವೆ ಮಾತ್ರ ಆಗಬೇಡಿ” ಎಂದು ಹೇಳಿ 38 ವರ್ಷದ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಡಿಎಲ್‌ಎಫ್ ಕಾಲೋನಿಯಲ್ಲಿ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬುಲಂದ್‌ಶಹರ್‌ನ ನರಸೈನಾ ಪ್ರದೇಶದ ಜಗಜಿತ್ ಸಿಂಗ್ ರಾಣಾ ಎಂದು ಗುರುತಿಸಲಾಗಿದೆ. ಔಷಧಿ ಪೂರೈಕೆ ವ್ಯವಹಾರ ಮಾಡುತ್ತಿದ್ದ ಜಗಜಿತ್ ಸಿಂಗ್ ಫ್ಲಾಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಪತ್ನಿ ಹಾಗೂ ಅತ್ತೆಯ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್‌ನಲ್ಲಿ ಎರಡು ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ.

ಸಿಂಗ್ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿ ನೆರೆಹೊರೆಯವರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಕೆಳಗಿಳಿಸಿದ್ದಾರೆ. ತನಿಖೆ ವೇಳೆ ಪೊಲೀಸರಿಗೆ ಜಗಜಿತ್ ಆತ್ಮಹತ್ಯೆಗೂ ಮುನ್ನ ರೆಕಾರ್ಡ್ ಮಾಡಿದ್ದ ಎರಡು ವಿಡಿಯೋಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಸಾಲಭಾದೆ : ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಪೊಲೀಸರ ಪ್ರಕಾರ, ಮೂರು ನಿಮಿಷ, ನಾಲ್ಕು ಸೆಕೆಂಡುಗಳ ವಿಡಿಯೋದಲ್ಲಿ ಜಗಜಿತ್ ತನ್ನ ಪತ್ನಿ, ಅತ್ತೆಯರಿಂದ ಜೀವ ಭಯವಿದೆ, ಅದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಬುಲಂದ್‌ಶಹರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ತನ್ನ ಅತ್ತೆಯಂದಿರು ವಾಸಿಸುತ್ತಿದ್ದಾರೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

ಒಂದು ವಿಡಿಯೋದಲ್ಲಿ ಜಗಜಿತ್ ಸಿಂಗ್ ರಾಣಾ ತನ್ನ ಮೇಲಾದ ಕಿರುಕುಳ ಬಗ್ಗೆ ವಿವರಿಸಿದ್ದಾರೆ. ಹಾಗೆಯೇ “ನನ್ನ ಆಸ್ತಿಯಲ್ಲಿ ಅವರಿಗೆ ಯಾರಿಗೂ ಪಾಲು ನೀಡಬಾರದು, ನನ್ನ ಮುಖವನ್ನೂ ಕೂಡಾ ಅವರಿಗೆ ತೋರಿಸಬಾರದು” ಎಂದು ಹೇಳಿದ್ದಾರೆ. ಜೊತೆಗೆ ತನ್ನ ಅಂತಿಮ ಸಂಸ್ಕಾರವನ್ನು ಪೊಲೀಸರು ಮತ್ತು ಆಡಳಿತ ಮಂಡಳಿಯೇ ನಡೆಸಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಎರಡನೇ ವೀಡಿಯೋದಲ್ಲಿ ಜಗಜಿತ್ ಸಿಂಗ್ ತನ್ನ ಕುತ್ತಿಗೆಗೆ ಕುಣಿಕೆ ಹಾಕುತ್ತಿರುವುದು ಕಂಡುಬಂದಿದೆ. “ಜೀವನದಲ್ಲಿ ನಿಮಗೆ ಬೇಕಾದುದನ್ನು ಮಾಡಿ, ಆದರೆ ಎಂದಿಗೂ ಮದುವೆಯಾಗಬೇಡಿ. ಜೈ ಶ್ರೀ ರಾಮ್” ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಸಿಂಗ್ ಕುಟುಂಬದ ದೂರಿಗಾಗಿ ಕಾಯುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...