ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

Date:

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಖಂಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾರಿ ನಿರ್ದೇಶನಾಲಯದ ನಡೆ ಕೇಂದ್ರ ಸರ್ಕಾರದ ಕೃಪಾ ಪೋಷಿತ ಕೀಳು ಮಟ್ಟದ ರಾಜಕೀಯ ನಡೆಯಾಗಿದೆ. ತನಿಖಾ ಸಂಸ್ಥೆಯು ಕೇಂದ್ರದ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸಿಬಲ್ ಆರೋಪಿಸಿದ್ದಾರೆ.

“ಅಜ್ಞಾನವೇ ಆನಂದವಾಗಿರುವಾಗ, ಬುದ್ಧಿವಂತರಾಗಿರುವುದು ಮೂರ್ಖತನ. ಇಡಿ ಕಾನೂನಿನ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ನಾನು ಭಾವಿಸುತ್ತೇನೆ. ಷೇರುದಾರರು ಷೇರುದಾರಾಗಿದ್ದರೆ, ಆಸ್ತಿಯು ಕಂಪನಿಯ ಮಾಲೀಕತ್ವದಲ್ಲಿದೆ. ಕಂಪನಿಯು ದಿವಾಳಿಯಾದರೆ ಷೇರುದಾರರಿಗೆ ಏನೂ ಸಿಗುವುದಿಲ್ಲ. ಹಾಗಾದರೆ ಯಾರು ಯಾರಿಗೆ ಮೋಸ ಮಾಡಿದರು? ಎಲ್ಲಿ ನಂಬಿಕೆಯ ಉಲ್ಲಂಘನೆ? ಯಾರು ಪಿತೂರಿ ಮಾಡಿದ್ದಾರೆ? ಇಡಿಗೂ, ನ್ಯಾಯಾಲಯಗಳಿಗೂ ಕಾನೂನು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ನಾನು ಈ ಘಟನೆಯಿಂದ ಸ್ವಲ್ಪ ದಿಗ್ಭ್ರಮೆಗೊಂಡಿದ್ದೇನೆ,” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಮತ ನೀಡದವರಿಗೆ ಕುಡಿಯುವ ನೀರು ನಿರಾಕರಣೆ!

“ಆದರೆ ಇಂದು ದೇಶದಲ್ಲಿ ಏನಾಗಿದೆ ಎಂದರೆ ಇಡಿ ಕೇಂದ್ರದ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದೆ. ಹೆಚ್ಚು ಮುಖ್ಯವಾದ ಇನ್ನೊಂದು ವಿಷಯವೆಂದರೆ ನ್ಯಾಷನಲ್‌ ಹೆರಾಲ್ಡ್ ಸೆಕ್ಷನ್ 25ರ ಕಂಪನಿಯಾಗಿದೆ. ಅದು ಲಾಭದ ಕಂಪನಿಯಲ್ಲ. ಎಜಿಎಲ್ ಸಂಸ್ಥೆಯನ್ನು ಸ್ಥಗಿತಗೊಳಿಸಿದರೆ, ಅದು ಮತ್ತೊಂದು ಲಾಭರಹಿತ ಕಂಪನಿಗೆ ಸೇರ್ಪಡೆಯಾಗುತ್ತದೆ. ಯಂಗ್ ಇಂಡಿಯಾ ಮತ್ತೊಂದು ಲಾಭರಹಿತ ಸಂಸ್ಥೆಯಾಗಿದೆ” ಎಂದು ಹೇಳಿದರು.

“ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿಗೆ ಸೋಲಿನ ಮುನ್ಸೂಚನೆ ಗೋಚರಿಸಿದೆ. ಡಿಸೆಂಬರ್ 3 ರ ಫಲಿತಾಂಶ ಹೊರಬೀಳಲಿದ್ದು, ಜನರ ಗಮನವನ್ನು ಬೇರೆಡೆ ಸೆಳೆಯುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ” ಎಂದು ಸಿಬಲ್ ತಿಳಿಸಿದರು.

ಯುಪಿಎ 1 ಮತ್ತು 2ರ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಕಪಿಲ್ ಸಿಬಲ್, ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾದರು.

ಇಡಿ ಕ್ರಮವನ್ನು “ಸೇಡು ತೀರಿಸಿಕೊಳ್ಳುವ ತಂತ್ರ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಈ ಸಂಸ್ಥೆಯು ಬಿಜೆಪಿಯ ‘ಸಮ್ಮಿಶ್ರ ಪಾಲುದಾರ’ನಾಗಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿಯಿಂದ ಈ ರೀತಿ ಮಾಡಲಾಗುತ್ತಿದೆ” ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...