ಟಿಎಂಸಿ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಹಣ: ವಿಡಿಯೋ ವೈರಲ್

Date:

ಲೈಂಗಿಕ ಹಗರಣ ಹಾಗೂ ಭೂಕಬಳಿಕೆ ಆರೋಪದಲ್ಲಿ ಬಂಧಿತರಾಗಿರುವ ಸ್ಥಳೀಯ ಟಿಎಂಸಿ ನಾಯಕ ಶಹಜಹಾನ್‌ ಶೇಖ್‌ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ 70 ಮಹಿಳೆಯರಿಗೆ 2 ಸಾವಿರ ರೂ. ನೀಡಲಾಗಿದೆ ಎಂಬ ಹೇಳಿಕೆಯನ್ನು ಸ್ಥಳೀಯ ಬಿಜೆಪಿ ನಾಯಕನೊಬ್ಬ ಹೇಳುತ್ತಿರುವ ವಿಡಿಯೋ ಎಲ್ಲಡೆ ವೈರಲ್‌ ಆಗುತ್ತಿದೆ.

45 ನಿಮಿಷಗಳ ಈ ವಿಡಿಯೋದಲ್ಲಿ ಸಂದೇಶ್‌ಖಾಲಿ ಮಂಡಲ್‌ನ ಅಧ್ಯಕ್ಷ ಗಂಗಾಧರ್‌ ಕಾಯಲ್‌ ಎಂಬಾತ ಮಹಿಳೆಯರು ಹಣ ಸ್ವೀಕರಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾನೆ. ಈ ಮೊದಲು ಇದೇ ವ್ಯಕ್ತಿ ಮಹಿಳೆಯರ ಅತ್ಯಾಚಾರ ಆರೋಪ ಸುಳ್ಳು ಎಂದು ಕೆಲ ದಿನಗಳ ಹಿಂದೆ ಹೇಳಿದ್ದ ವಿಡಿಯೋ ವೈರಲ್‌ ಆಗಿತ್ತು.

ಲೈಂಗಿಕ ಹಗರಣ ಹಾಗೂ ಭೂಕಬಳಿಕೆ ಆರೋಪದಲ್ಲಿ ಬಂಧಿತನಾಗಿರುವ ಶೇಖ್‌ ಶಹಜಹಾನ್‌ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕೆ 70 ಮಹಿಳೆಯರು ತಲಾ 2 ಸಾವಿರ ರೂ ಸ್ವೀಕರಿಸಿದ್ದಾರೆ ಎಂದು ಹೇಳುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“50 ಮತಗಟ್ಟೆಗಳಲ್ಲಿ 2.5 ಲಕ್ಷ ರೂ. ನಗದು ಅಗತ್ಯವಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವ ಶೇ.30 ಮಂದಿ ಮಹಿಳೆಯರೆ ಆಗಿರುತ್ತಾರೆ. ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ಅವರನ್ನು ತೃಪ್ತಿಪಡಿಸಲು ಅವರಿಗೆ ಉತ್ತಮ ಸಂಭಾವನೆ ನೀಡಬೇಕು. ಈ ಸಂದರ್ಭದಲ್ಲಿ ಮಹಿಳೆಯರು ಪೊಲೀಸರ ಮುಂದೆ ಮೊದಲ ಸಾಲಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ದೃಶ್ಯದಲ್ಲಿ ಗಂಗಾಧರ್‌ ಕಾಯಲ್‌ ಹೇಳುತ್ತಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಟಿಎಂಸಿ ವಕ್ತಾರ ರಿಜು ದತ್‌, ಸಂದೇಶ್‌ಖಾಲಿಯನ್ನು ಪ್ರಚೋದಿಸುವ ಬಿಜೆಪಿಯ ನಕಲಿ ನಿರೂಪಣೆಗಳು ನಿಜವಾಗುತ್ತಿವೆ. ಈಗ ಬಿಡುಗಡೆಯಾಗುತ್ತಿರುವ ವಿಡಿಯೋಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಿದ್ದಾರೆ. ಈ ವಿಡಿಯೋಗಳನ್ನು ಕೆಲವು ದಿನಗಳಿಂದ ಟಿಎಂಸಿ ಹಂಚಿಕೊಳ್ಳುತ್ತಿದೆ.

ಮೇ.4 ರಂದು ಬಿಡುಗಡೆಗೊಂಡಿದ್ದ ವಿಡಿಯೋದಲ್ಲಿ ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿಯ ಆದೇಶದ ಮೇರೆಗೆ ಪ್ರತಿಭಟನೆಗಳನ್ನು ನಡೆಸಲಾಗಿದ್ದು, ಇದರ ಹಿಂದಿನ ಸಂಪೂರ್ಣ ಪಿತೂರಿ ಸುವೆಂದು ಎಂದು ಸಂದೇಶ್‌ಖಾಲಿ ಮಂಡಲ್‌ನ ಅಧ್ಯಕ್ಷ ಗಂಗಾಧರ್‌ ಕಾಯಲ್‌ ಹೇಳಿದ್ದ.

ಆದರೆ ಟಿಎಂಸಿ ನಾಯಕರ ಈ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು ಚುನಾವಣೆಗಾಗಿ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ,

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...