ಬುಟ್ಟಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ: ‘ಬೇರೆ ದಾರಿಯಿರಲಿಲ್ಲ, ಕ್ಷಮಿಸಿ’ ಎಂದು ಪತ್ರ ಬರೆದಿಟ್ಟಿರುವ ಪೋಷಕರು

Date:

ಮೂರು ದಿನಗಳ ನವಜಾತ ಹೆಣ್ಣು ಮಗುವನ್ನು ಬುಟ್ಟಿಯಲ್ಲಿ ಬಿಟ್ಟು ಹೋಗಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಬುಟ್ಟಿಯಲ್ಲಿ ಮಗುವಿನ ಪೋಷಕರು ಪತ್ರವನ್ನೂ ಬರೆದಿಟ್ಟಿದ್ದಾರೆ. ಆರ್ಥಿಕ ಸ್ಥಿತಿ ಕೆಟ್ಟದಾಗಿರುವ ಕಾರಣ ಮಗುವನ್ನು ಬೆಳೆಸಲು ಸಾಧ್ಯವಾಗದು, ನಮ್ಮನ್ನು ಕ್ಷಮಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ನವಿ ಮುಂಬೈನ ಪನ್ವೆಲ್ ಪ್ರದೇಶದ ಟಕ್ಕಾ ಕಾಲೋನಿಯ ರಸ್ತೆಬದಿಯಲ್ಲಿ ನೀಲಿ ಬಣ್ಣದ ಬುಟ್ಟಿಯಲ್ಲಿ ಮಗು ಇರುವುದನ್ನು ಸ್ಥಳೀಯ ನಿವಾಸಿಯೊಬ್ಬರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮಗುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಆಸ್ಪತ್ರೆ ಸುತ್ತ ತಿರುಗುತ್ತಿದ್ದ ನಾಯಿ ಬಾಯಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಟ್ಟಿಯಲ್ಲಿ ಇಂಗ್ಲಿಷ್‌ನಲ್ಲಿ ಬರೆದ ಪತ್ರ ಕಂಡುಬಂದಿದೆ. ಪತ್ರದಲ್ಲಿ ಮಗುವಿನ ಪೋಷಕರು “ಆರ್ಥಿಕ ಸ್ಥಿತಿ ಸರಿಯಾಗಿಲ್ಲ, ಇದರಿಂದಾಗಿ ಮಗುವನ್ನು ಬೆಳೆಸಲು ಸಾಧ್ಯವಾಗುವುದಿಲ್ಲ, ಬೇರೆ ದಾರಿಯಿರಲಿಲ್ಲ ಕ್ಷಮಿಸಿ” ಎಂದು ಬರೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಮಗುವನ್ನು ಮಕ್ಕಳ ವೈದ್ಯರ ಬಳಿಗೆ ಕರೆದೊಯ್ದಿದ್ದು, ಮಗು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಪೊಲೀಸರು ಮಗುವಿನ ಪೋಷಕರನ್ನು ಹುಡುಕುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಸದ್ಯ ಪನ್ವೇಲ್ ಪಟ್ಟಣ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...