ವಿಕಿಪೀಡಿಯಾ ವಿರುದ್ಧ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಎಎನ್ಐ

Date:

ಸುದ್ದಿಸಂಸ್ಥೆ ಎಎನ್‌ಐ ಮೀಡಿಯಾ ಪ್ರೈವೇಟ್‌ ಲಿಮಿಟೆಡ್, ವಿಕಿಪೀಡಿಯಾ ಸಂಸ್ಥೆ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಧ್ಯಂತರ ಪರಿಹಾರಕ್ಕಾಗಿ ಎಎನ್‌ಐ ಪರ ಅರ್ಜಿ ಸ್ವೀಕರಿಸಿದ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ನೋಟಿಸ್‌ ಜಾರಿಗೊಳಿಸಿದ್ದು, ಪ್ರಕರಣವನ್ನು ಆಗಸ್ಟ್‌ 20 ರಂದು ವಿಚಾರಣೆ ನಡೆಸಲಾಗುತ್ತದೆ.

ವಿಕಿಪೀಡಿಯಾ ಮಾನಹಾನಿ ಸುದ್ದಿ ಪ್ರಕಟಿಸಿರುವ ಆರೋಪ ಮಾಡಿರುವ ಎಎನ್‌ಐ, ವೆಬ್‌ಸೈಟ್‌ನಿಂದ ಈ ವಿಷಯವನ್ನು ತೆಗೆದುಹಾಕುವಂತೆ ಹೇಳಿದೆ. ಇದರ ಜೊತೆ ಮಾನನಷ್ಟಕ್ಕಾಗಿ 2 ಕೋಟಿ ರೂ. ಪರಿಹಾರವನ್ನು ನೀಡುವಂತೆ ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಎನ್‌ಐ ಬಗ್ಗೆ ವಿಕಿಪೀಡಿಯಾ ಪುಟದಲ್ಲಿ “ಕೇಂದ್ರ ಸರ್ಕಾರದ ಅಧೀನದ ಸುದ್ದಿಸಂಸ್ಥೆಯಾಗಿ ಎಎನ್‌ಐ ಕಾರ್ಯನಿರ್ವಹಿಸುತ್ತಿದ್ದು, ನಕಲಿ ಸುದ್ದಿ ವೆಬ್‌ಸೈಟ್‌ಗಳ ಜಾಲದಿಂದ ವಿಷಯಗಳನ್ನು ಭಿತ್ತರಿಸುವುದು ಹಾಗೂ ತಪ್ಪಾದ ಸುದ್ದಿಗಳನ್ನು ವರದಿ ಮಾಡಲಾಗುತ್ತಿದೆ” ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಳಿ ತಪ್ಪುತ್ತಿದೆಯೇ ರಾಜ್ಯ ಕಾಂಗ್ರೆಸ್ ಸರ್ಕಾರ?

ಎಎನ್‌ಐ ಪರ ವಕೀಲರಾದ ಸಿದ್ಧಾಂತ್‌ ಕುಮಾರ್, ವಿಕಿಪೀಡಿಯಾ ಮಾನನಷ್ಟ ವರದಿಗಳನ್ನು ತನ್ನ ಪುಟದಲ್ಲಿ ವಿವರಿಸಲಾಗಿದೆ. ಸಾರ್ವಜನಿಕ ಉಪಯುಕ್ತತೆಯ ವೇದಿಕೆಯಾಗಿದ್ದು, ಖಾಸಗಿ ವಲಯದಂತೆ ವರ್ತಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ವಿಕಿಪೀಡಿಯಾದ ಎಎನ್‌ಐ ಮಾಹಿತಿ ಪುಟದಲ್ಲಿ ತನ್ನ ಸ್ವಂತ ತಿದ್ದುಪಡಿ ಸಂಪಾದಕರನ್ನು ಹೊರತುಪಡಿಸಿ ಬಾಹ್ಯ ತಿದ್ದುಪಡಿ ಮಾಡುವವರಿಗೆ ಅನುಮತಿಯನ್ನು ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ನವಿನ್ ಚಾವ್ಲಾ, ವಿಕಿಪೀಡಿಯಾ ತನ್ನ ಅಭಿಪ್ರಾಯಗಳಿಗೆ ಬದ್ಧವಾಗಿದೆ ಆದರೆ ನ್ಯಾಯಾಲಯದ ಮುಂದೆ ಈ ಮಾಹಿತಿಯ ಬಗ್ಗೆ ವಿವರಣೆ ನೀಡಬೇಕು ಎಂದು ತಿಳಿಸಿದರು.

ವಿಕಿಪೀಡಿಯಾ ಎಎನ್‌ಐ ಬಗ್ಗೆ ತನ್ನ ಪುಟದಲ್ಲಿ ಪ್ರಕಟಿಸಿರುವ ಮಾಹಿತಿ ಸುಳ್ಳಿನಿಂದ ಕೂಡಿದ್ದು, ಸಂಸ್ಥೆಯ ಘನತೆಗೆ ಧಕ್ಕೆ ತರುವಂತ ಕೆಲಸ ಮಾಡಿದೆ. ಒಳ್ಳೆಯ ಉತ್ತಮ ಸಂಸ್ಥೆಯ ಬಗ್ಗೆ ಅಪಖ್ಯಾತಿ ತರುವ ಗುರಿಯನ್ನು ಹೊಂದಿದೆ ಎಂದು ಎಎನ್‌ಐ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...