ಸುದ್ದಿ ನಿರೂಪಕಿ ಆತ್ಮಹತ್ಯೆ; ಅನುಮಾನ ಹುಟ್ಟುಹಾಕಿದ ಇನ್ಸ್ಟಾ​​​ ಪೋಸ್ಟ್‌

Date:

ತೆಲುಗಿನ ಹಲವು ಸುದ್ದಿ ಮಾಧ್ಯಮಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ವೇಚ್ಛಾ ವೋತಾರ್ಕರ್‌ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

35 ವರ್ಷದ ಶ್ವೇಚ್ಛಾ ಅವರು ಪ್ರಸ್ತುತ ‘ಟಿ ನ್ಯೂಸ್’ ಮಾಧ್ಯಮ ಸಂಸ್ಥೆಯಲ್ಲ ನಿರೂಪಕಿಯಾಗಿದ್ದರು. ಅವರು ಹೈದರಾಬಾದ್‌ನ ರಾಮ್‌ ನಗರದಲ್ಲಿ ತಮ್ಮ ತಾಯಿಯೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್‌ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈವರೆಗೆ, ಅವರ ಸಾವಿಗೆ ಕಾಣವೇನು ಎಂಬುದು ಗೊತ್ತಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಆತ್ಮಹತ್ಯೆಗೆ ಶರಣಾಗುವ ಕೆಲವು ಗಂಟೆಗಳ ಮುನ್ನ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ತಮ್ಮ ಫೋಟೋ ಜೊತೆಗೆ, ‘ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ’ ಎಂದು ಬರೆದುಕೊಂಡಿದ್ದಾರೆ. ಅವರು ಮಾನಸಿಕವಾಗಿ ನೊಂದಿದ್ದರು ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ.

ಅವರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣವಿರಬಹುದು ಎಂದು ಊಹಿಸಲಾಗಿದೆ. ಇದನ್ನು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...