ಗಂಗಾ ನದಿ ತೀರದಲ್ಲಿ ಮಲವಿಸರ್ಜನೆ ಆರೋಪ: ಯುಪಿ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

Date:

ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕ ಆಗಿರುವುದರಿಂದ ಗಂಗಾ ನದಿಯ ದಡದಲ್ಲಿ ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನಿಪುನ್ ಭೂಷಣ್ ಎಂಬವರು ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದಾದ ನಂತರ ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗೂ (ಯುಪಿ ಪಿಸಿಬಿ) ನೋಟಿಸ್ ನೀಡಲಾಗಿದೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ | ಮಹಿಳೆಯರು ಸ್ನಾನ ಮಾಡುವ, ಬಟ್ಟೆ ಬದಲಾಯಿಸುವ ಚಿತ್ರಗಳ ಮಾರಾಟ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯಗಳ ಕಳಪೆ ವ್ಯವಸ್ಥೆಯಿಂದಾಗಿ ಉತ್ತರ ಪ್ರದೇಶ ಸರ್ಕಾರವು ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ ಎಂದು ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

2024ರ ನವೆಂಬರ್‌ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಸಂಗಮದ ಕೆಳಭಾಗದಲ್ಲಿ 100 ಮಿಲಿಲೀಟರ್‌ಗೆ 3,300 ಎಂಪಿಎನ್‌ನಲ್ಲಿ ಕೋಲಿಫಾರ್ಮ್ ಮಟ್ಟ ದಾಖಲಾಗಿದೆ. ಇದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನಿಗದಿಪಡಿಸಿದ 2,500 ಎಂಪಿಎನ್/100 ಎಂಎಲ್‌ನ ಮಿತಿಯನ್ನು ಮೀರಿದೆ.

ಈ ಮಾಲಿನ್ಯಕಾರಕ ನೀರಿನಿಂದಾಗಿ ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆ ಉಂಟಾಗಬಹುದು. ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯ ಉಂಟಾಗಬಹುದು ಎಂದು ಅರ್ಜಿದಾರ ನಿಪುನ್ ಭೂಷಣ್ ವಾದಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ | ಮಹಿಳೆಯರು ಸ್ನಾನ ಮಾಡುವ, ಬಟ್ಟೆ ಬದಲಾಯಿಸುವ ಚಿತ್ರಗಳ ಮಾರಾಟ!

ಇನ್ನು ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮೂಲಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಇತ್ತೀಚೆಗೆ ತಿಳಿಸಿದೆ.

ಇನ್ನು ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರ ಮಂಡಳಿಗೆ (ಯುಪಿಪಿಸಿಬಿ) ತಿಳಿಸಿದ್ದರೂ ಯಾವುದೇ ಅಗತ್ಯ ಕ್ರಮವನ್ನು ಕೈಗೊಂಡಿಲ್ಲ. ಬದಲಾಗಿ ಕೆಲವು ಪ್ರದೇಶಗಳ ನೀರಿನ ಪರೀಕ್ಷೆ ನಡೆಸಿ ಪತ್ರ ಬರೆದಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...