ಪುಣೆ: ಕೆಲಸದ ಒತ್ತಡದಿಂದ ಸಿಎ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

Date:

ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (ಸಿಎ) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಹೆಚ್‌ಆರ್‌ಸಿ) ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ ಕೋರಿದೆ.

ಅರ್ನ್ಸ್ಟ್ ಅಂಡ್ ಯಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷ ವಯಸ್ಸಿನ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಕಳೆದ ಜುಲೈ 26ರಂದು ಸಾವನ್ನಪ್ಪಿದ್ದರು. ಸಾವಿನ ಬಳಿಕ ಕೆಲಸದ ಒತ್ತಡದಿಂದ ನಮ್ಮ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಒಳಗೊಂಡಂತೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಕಾರ್ಮಿಕ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಎನ್‌ಎಚ್‌ಆರ್‌ಸಿ ಪ್ರಕಾರ, ಪೆರಾಯಿಲ್ ಅವರ ಸಾವು ಕಳವಳಕಾರಿಯಾಗಿದೆ. ಕಾರ್ಪೋರೇಟ್‌ ಕೆಲಸದ ಸಂಸ್ಕೃತಿಯು ಮಾನಸಿಕ ಮತ್ತು ದೈಹಿಕವಾಗು ಉಂಟು ಮಾಡುವ ಹಾನಿಯ ಬಗ್ಗೆ ಆತಂಕಕಾರಿ ಭಾವನೆ ಮೂಡಿಸುತ್ತದೆ. ಇಂತಹ ಬೆಳವಣಿಗೆಗಳಿಂದ ನಿದ್ರಾಹೀನತೆ ಸೇರಿದಂತೆ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಕಾರ್ಪೋರೇಟ್‌ ಸಂಸ್ಥೆಗಳು ಅಸಾಧ್ಯ ಗುರಿಗಳತ್ತ ನಿರಂತರ ಅನ್ವೇಷಣೆಯೇ ಇದಕ್ಕೆ ಕಾರಣವಾಗಿದ್ದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳಿಗೆ ಕಾರಣವಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

ಈ ಘಟನೆ ಬೆನ್ನಲ್ಲೇ ಮಾನವ ಹಕ್ಕುಗಳ ಆಯೋಗವು, ಕಾರ್ಪೋರೇಟ್‌ ಸಂಸ್ಥೆಗಳಲ್ಲಿ ಕಾರ್ಯಸ್ಥಳದ ಸುರಕ್ಷತೆ ಕಾಯ್ದುಕೊಳ್ಳುವ ವಿಶೇಷ ತಂಡವೊಂದನ್ನ ರಚಿಸಿದೆ. ಇದು ಕಾರ್ಮಿಕ ಶಾಸನಗಳು ಹಾಗೂ ನಿಬಂಧನೆಗಳನ್ನು ಪರಿಶೀಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸು ಮಾಡಲಿದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಕೆಲಸ ಸಮಯ, ಸುರಕ್ಷತಾ ಕ್ರಮಗಳ ಕುರಿತು ವಿಶೇಷ ಮಾನದಂಡಗಳನ್ನು ರೂಪಿಸಲು ಶಿಫಾರಸು ಮಾಡಲಿದೆ ಎಂದು ಎನ್‌ಹೆಚ್‌ಆರ್‌ಸಿ ಹೇಳಿದೆ.

ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. 26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ 4 ತಿಂಗಳಲ್ಲೇ ಸಾವನ್ನಪ್ಪಿದ್ದರು. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಆಕೆ ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದರು. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿತ್ತು. ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿ ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...