ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ: ಎನ್‌ಐಎ

Date:

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಬಗ್ಗೆ ಖಚಿತ ಸುಳಿವು ನೀಡಿದರೆ 10 ಲಕ್ಷ ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ಎಎನ್‌ಐ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ನಂಟು ಹೊಂದಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅನ್ಮೋಲ್ ಬಿಷ್ಣೋಯ್ ಅನ್ನು ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿಸಿದೆ.

ಅನ್ಮೋಲ್ ಬಿಷ್ಣೋಯ್ ಅಲಿಯಾಸ್ ಭಾನು ಕೆನಡಾದಲ್ಲಿ ನೆಲೆಸಿದ್ದು ಅಮೆರಿಕಕ್ಕೆ ಆಗಾಗ ಪ್ರಯಾಣಿಸುತ್ತಿದ್ದಾನೆ ಎಂದು ಹೇಳಲಾಗಿದೆ. ಆತನ ಬಗ್ಗೆ ಖಚಿತ ಸುಳಿವು ನೀಡಿದವರಿಗೆ ಕಳೆದ ತಿಂಗಳೇ ಬಹುಮಾನವನ್ನು ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆಯ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡವಿದೆ ಎಂದು ಹೇಳಲಾಗಿದೆ.

ಇನ್ನು ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿಗಳಲ್ಲಿ ಒಬ್ಬರಿಗೆ ಮುಂಬೈ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನಿರಾಕರಿಸಿದೆ. ಅನ್ಮೋಲ್ ಬಿಷ್ಣೋಯ್ ಪ್ರಚೋದನೆಯಿಂದಾಗಿ ಆರೋಪಿಗಳು ಸಲ್ಮಾನ್ ಖಾನ್ ಅವರ ಕೊಲೆ ಮಾಡುವ ಉದ್ದೇಶದಿಂದ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪಾತಕಿ ಲಾರೆನ್ಸ್‌ನನ್ನು ಸಮರ್ಥಿಸುತ್ತಿದೆ ಮೋದಿ ಭಕ್ತ ಪಡೆ!

ಈ ಪ್ರಕರಣದಲ್ಲಿ ಪಂಜಾಬ್‌ನ ಫಾಜಿಲ್ಕಾ ಮೂಲದ ಅನ್ಮೋಲ್ ಬಿಷ್ಣೋಯ್ ಮತ್ತು ಲಾರೆನ್ಸ್ ಬಿಷ್ಣೋಯ್ ಇಬ್ಬರೂ ಪ್ರಮುಖ ಆರೋಪಿಗಳೆಂದು ಹೆಸರಿಸಲಾಗಿದೆ. ಈ ಪೈಕಿ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿದ್ದಾನೆ.

ಇನ್ನು ಖಾನ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿದ್ದ ಅನ್ಮೋಲ್ ಬಿಷ್ಣೋಯ್ ವಿರುದ್ಧ ಏಪ್ರಿಲ್‌ನಲ್ಲಿ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...