ದೆಹಲಿ ಸ್ಫೋಟ: ಆತ್ಮಹತ್ಯಾ ಬಾಂಬರ್‌ನ ಸಹಚರನ ಬಂಧನ

Date:

ದೆಹಲಿ ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್‌ ಎಂದು ಹೇಳಲಾದ ಡಾ. ಉಮರ್ ಉನ್ ನಬಿಯ ಸಹಚರನನ್ನು ಭಯೋತ್ಪಾದನಾ ನಿಗ್ರಹ ಸಂಸ್ಥೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಬಂಧಿಸಿದೆ. ಈ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.

ಬಂಧಿತ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನಿವಾಸಿ ಅಮೀರ್ ರಶೀದ್ ಅಲಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿ ಭಯೋತ್ಪಾದನಾ ದಾಳಿಯನ್ನು ನಡೆಸಲು ಆಪಾದಿತ ಆತ್ಮಹತ್ಯಾ ಬಾಂಬರ್‌ನೊಂದಿಗೆ ಸಂಚು ರೂಪಿಸಿದ್ದ. ದಾಳಿಯಲ್ಲಿ ಬಳಸಲಾಗಿರುವ ಬಿಳಿ i20 ಕಾರನ್ನು ಅಮೀರ್ ರಶೀದ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ | ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ: ಎಂಟು ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೆಹಲಿ ಪೊಲೀಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಹರಿಯಾಣ ಪೊಲೀಸ್, ಯುಪಿ ಪೊಲೀಸ್ ಮತ್ತು ವಿವಿಧ ಸಂಸ್ಥೆಗಳ ಸಮನ್ವಯದೊಂದಿಗೆ ಎನ್‌ಐಎ ಕಾರ್ಯನಿರ್ವಹಿಸುತ್ತಿದ್ದು, ತನ್ನ ತನಿಖೆಯನ್ನು ಮುಂದುವರಿಸಿದೆ. ಬಾಂಬ್ ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲು ಮಾಡಲು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ” ಎಂದು ತನಿಖಾ ಸಂಸ್ಥೆ ಹೇಳಿದೆ.

ಇನ್ನು ದೆಹಲಿ ಸ್ಫೋಟ ನಡೆಸಿದ ವ್ಯಕ್ತಿ ಡಾ. ಉಮರ್ ಉನ್ ನಬಿ ಎಂದು ದೆಹಲಿ ಪೊಲೀಸರು ಗುರುವಾರ ದೃಢಪಡಿಸಿದ್ದಾರೆ. ಉಮರ್ ಹರಿಯಾಣದ ಫರಿದಾಬಾದ್‌ನ ಅಲ್ ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...