ಸಿಪಿಐಎಂ ಕಾರ್ಯಕರ್ತನ ಹತ್ಯೆ; ಒಂಬತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

Date:

ಸುಮಾರು 19 ವರ್ಷಗಳ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ತಲಶೇರಿಯ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಅವರನ್ನು 2005ರ ಅಕ್ಟೋಬರ್ 3ರಂದು ಹತ್ಯೆ ಮಾಡಲಾಗಿದೆ. ಸಿಪಿಐಎಂ ಮತ್ತು ಆರ್‌ಎಸ್‌ಎಸ್ ನಡುವೆ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿದ್ದ ಅವಧಿಯಲ್ಲಿ ರಿಜಿತ್ ಶಂಕರನ್ ಅವರನ್ನು ಚುಂಡಾದ ದೇವಸ್ಥಾನ ಒಂದರ ಬಳಿ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಉಡುಪಿ | ಸಾರಿಗೆ ದರ ಹೆಚ್ಚಳ ಜನ ವಿರೋಧಿ : ಸಿಪಿಐಎಂ ಖಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಿಜಿತ್ ದೇವಾಲಯದ ಹಾದಿಯಲ್ಲಿ ಸಾಗುತ್ತಿದ್ದಾಗ ಆರೋಪಿಗಳು ಶಸ್ತ್ರಾಸ್ತ್ರಗಳನ್ನು ಹಿಡಿದು ಬಾವಿಯ ಸಮೀಪದಲ್ಲಿ ಹೊಂಚು ಹಾಕಿ ಕೂತು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ರಿಜಿತ್‌ನ ಮೂವರು ಸ್ನೇಹಿತರು ಕೂಡಾ ಗಾಯಗೊಂಡಿದ್ದರು.

ಜನವರಿ 4ರಂದು ತಲಶೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ದೋಷಿಗಳೆಂದು ತೀರ್ಪು ನೀಡಿದೆ. ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಇನ್ನು ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ, ಓರ್ವ ಆರೋಪಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಅಪರಾಧಿಗಳಲ್ಲಿ ಸುಧಾಕರನ್ (57), ಜಯೇಶ್ (41), ರಂಜಿತ್ (44), ಅಜೀಂದ್ರನ್ (51), ಅನಿಲ್‌ಕುಮಾರ್ (52), ರಾಜೇಶ್ (46), ಶ್ರೀಕಾಂತ್ (47), ಅವರ ಸಹೋದರ ಶ್ರೀಜಿತ್ (43), ಮತ್ತು ಭಾಸ್ಕರನ್‌ಗೆ (67) ಈಗ ಜೀವಾವಧಿ ಶಿಕ್ಷೆ ಲಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...