ಬಿಹಾರ | ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ಸಿಎಂ ಘೋಷಣೆ

Date:

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ ನೀಡುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಯಿರುವ ಕಾರಣ ಈ ಪ್ರಕಟಣೆ ಘೋಷಿಸಿದ್ದಾರೆ ಎನ್ನಲಾಗಿದೆ.

ಸಂಪುಟ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದ್ದು, ಶೇ. 35 ರಷ್ಟು ಮೀಸಲಾತಿಗೆ ಮಹಿಳಾ ಅಭ್ಯರ್ಥಿಯು ಬಿಹಾರದ ನಿವಾಸಿಯಾಗಿರುವುದು ಕಡ್ಡಾಯವಾಗಿದೆ. ಇದರೊಂದಿಗೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದ ಸಂಪುಟ ಸಭೆಯಲ್ಲಿ 43 ಪ್ರಮುಖ ಪ್ರಸ್ತಾವನೆಗಳನ್ನು ಅನುಮೋದಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ಸ್ಥಳೀಯ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಬೇಕೆಂದು ವಿಪಕ್ಷ ನಾಯಕರು ಒತ್ತಾಯಿಸುತ್ತಿದ್ದರು. ನಿತೀಶ್ ಸರ್ಕಾರ ಈಗ ಈ ಬೇಡಿಕೆಯನ್ನು ಈಡೇರಿಸಿದೆ. ಬಿಹಾರದ ಮಹಿಳೆಯರಿಗೆ ಮಾತ್ರ ಶೇ. 35 ರಷ್ಟು ಮೀಸಲಾತಿ ನೀಡುವುದಾಗಿ ಹೇಳಲಾಗಿದೆ. ಈ ಹಿಂದೆ, ರಾಜ್ಯದ ಸ್ಥಳೀಯ ನಿವಾಸಿಗಳಾಗಲಿ ಅಥವಾ ಬೇರೆ ಯಾವುದೇ ರಾಜ್ಯದವರಾಗಲಿ ಎಲ್ಲ ಮಹಿಳೆಯರಿಗೆ ಶೇ. 35 ರಷ್ಟು ಮೀಸಲಾತಿ ನೀಡಲಾಗುತ್ತಿತ್ತು.

ಇದೇ ಸಂದರ್ಭದಲ್ಲಿ ಬಿಹಾರದ ಯುವಕರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಒದಗಿಸುವ, ಅವರಿಗೆ ತರಬೇತಿ ನೀಡುವ ಮತ್ತು ಅವರನ್ನು ಸಮರ್ಥರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಸಂಪುಟಸಭೆಯು ಬಿಹಾರ ಯುವ ಆಯೋಗ ರಚನೆಗೆ ಅನುಮೋದನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...