ನಿತೀಶ್ ಕುಮಾರ್, ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ಪ್ರಯಾಣ: ಇಬ್ಬರು ನಾಯಕರ ಮುಂದಿನ ನಡೆಯೇನು?

Date:

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ಹೊಸ ಸರ್ಕಾರದ ಯೋಜನೆಯ ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ಸಲುವಾಗಿ ಎನ್‌ಡಿಎ ಹಾಗೂ ವಿಪಕ್ಷಗಳ ಒಕ್ಕೂಟ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ಪ್ರಯಾಣ ಬೆಳಸಿದ್ದಾರೆ.

ಆಶ್ಚರ್ಯಕರ ಸಂಗತಿಯಲ್ಲಿ ನಿತೀಶ್ ಕುಮಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇವರಿಬ್ಬರು ಪಾಟ್ನಾ- ದೆಹಲಿ ವಿಸ್ತಾರ ವಿಮಾನ ಯುಕೆ-718 ನಲ್ಲಿ ಬೆಳಿಗ್ಗೆ 10.40ಕ್ಕೆ ಪ್ರಯಾಣ ಬೆಳಸಿದರು.

ಚುನಾವಣಾ ಆಯೋಗವು ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು, 240 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಬಹುಮತ ಸಂಖ್ಯೆಗಳಿಗೆ 32 ಸ್ಥಾನಗಳ ಕೊರತೆಯಿದೆ. ಸರ್ಕಾರ ರಚನೆಗಾಗಿ ಇತರ 53 ಸ್ಥಾನಗಳನ್ನು ಗೆದ್ದಿರುವ ಎನ್‌ಡಿಎ ಮಿತ್ರಪಕ್ಷಗಳನ್ನು ಅವಲಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

ತಾನು ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ನಿತೀಶ್‌ ಕುಮಾರ್‌ ಘೋಷಿಸಿದ್ದರೂ ಜೆಡಿಯು ಮುಖ್ಯಸ್ಥರ ಹಿಂದಿನ ನಡೆಗಳನ್ನು ಗಮನಿಸಿದರೆ ಮುಂದಿನ ರಾಜಕೀಯ ನಡೆಗಳು ಏನಾಗುತ್ತದೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಯಲ್ಲಿ ಆರ್‌ಜೆಡಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಅಲ್ಲದೆ ವಿಪಕ್ಷಗಳ ಒಕ್ಕೂಟ ಇಂಡಿಯಾ ಮೈತ್ರೀಕೂಟವನ್ನು ಆರಂಭಿಸದವರಲ್ಲಿ ಮುಂಚೂಣಿಯಲ್ಲಿದ್ದವರು ನಿತೀಶ್‌ ಕುಮಾರ್. ಕೆಲವು ತಿಂಗಳ ಹಿಂದೆ ಆರ್‌ಜೆಡಿಯೊಂದಿಗೆ ಉಂಟಾದ ರಾಜಕೀಯ ಭಿನ್ನಾಭಿಪ್ರಾಯಗಳಿಂದ ಎನ್‌ಡಿಎ ಮೈತ್ರೀಕೂಟ ಸೇರಿಕೊಂಡರು. ಇವರ ರಾಜಕೀಯ ನಡೆ ಯಾವಾಗ ಬೇಕಾದರೂ ಬದಲಾಗಬಹುದು.

ವಿಪಕ್ಷಗಳ ಒಕ್ಕೂಟ ಇಂಡಿಯಾ ಒಟ್ಟು 234 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಹುಮತ ಸಂಖ್ಯೆ 272ಕ್ಕೆ 38 ಸ್ಥಾನಗಳ ಕೊರತೆಯಿದೆ. ಟಿಡಿಪಿ,ಜೆಡಿಯು ಹಾಗೂ ಸಣ್ಣ ಪುಟ್ಟ ಪಕ್ಷೇತರರು ಬೆಂಬಲ ನೀಡಿದರೆ ಸರ್ಕಾರ ರಚಿಸುವುದು ಕಷ್ಟವೇನಿಲ್ಲ. ಮುಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ರಾಜಕೀಯ ಪರಿಸ್ಥಿತಿ ಬದಲಾದರೆ ಆಶ್ಚರ್ಯವೇನಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...