ಖರ್ಗೆ, ರಾಹುಲ್‌ ಗಾಂಧಿ ಅವರನ್ನು ಭೇಟಿಯಾದ ನಿತೀಶ್‌ ಕುಮಾರ್‌; ಪ್ರತಿಪಕ್ಷಗಳ ಒಗ್ಗಟ್ಟಿನ ಚರ್ಚೆ ಸಾಧ್ಯತೆ

Date:

  • ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭೇಟಿಗೆ ಕರೆದ ಖರ್ಗೆ
  • ದೆಹಲಿ ಭೇಟಿ ಸಂದರ್ಭ ಇತರ ಪಕ್ಷಗಳ ನಾಯಕರ ಜೊತೆ ಮಾತುಕತೆ

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮೂರು ದಿನಗಳ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಬುಧವಾರ (ಏಪ್ರಿಲ್‌ 12) ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ಇವರೊಡನೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರೂ ತೆರಳಿದ್ದಾರೆ. ಖರ್ಗೆ ಅವರ ನಿವಾಸದಲ್ಲಿ ನಿತೀಶ್‌ ಹಾಗೂ ತೇಜಸ್ವಿ ಯಾದವ್‌ ಖರ್ಗೆ ಹಾಗೂ ರಾಹುಲ್‌ ಅವರನ್ನು ಭೇಟಿಯಾಗಿದ್ದಾರೆ.

ದೆಹಲಿ ಭೇಟಿ ವೇಳೆ ನಿತೀಶ್‌ ಅವರು ಕಾಂಗ್ರೆಸ್‌ ಹಾಗೂ ಪ್ರತಿಪಕ್ಷಗಳನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೆ ನಿತೀಶ್‌ ಅವರು ಖರ್ಗೆ ಅವರ ಸೂಚನೆ ಮೇರೆಗೆ ಮಂಗಳವಾರ (ಏಪ್ರಿಲ್‌ 11) ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಕಾಂಗ್ರೆಸ್‌ ಹಾಗೂ ಪ್ರತಿಪಕ್ಷಗಳನ್ನು ಒಂದುಗೂಡಿಸಲು ನಿತೀಶ್‌ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಧ್ಯಮಗಳ ವರದಿ ಹೇಳಿದೆ.

ದೆಹಲಿಗೆ ಆಗಮಿಸಿದ ಬಳಿಕ ನಿತೀಶ್‌ ಕುಮಾರ್‌ ಮೊದಲು ಬಿಹಾರದಲ್ಲಿ ಮಿತ್ರಪಕ್ಷ ಆರ್‌ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್‌ ಅವರನ್ನು ಭೇಟಿ ಮಾಡಿದರು.

ಲಾಲು ಪ್ರಸಾದ್‌ ಅವರ ಪುತ್ರ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಅವರು ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರವಾಸದ ವೇಳೆ ನಿತೀಶ್ ಅವರು ಖರ್ಗೆ ಅವರನ್ನು ಹೊರತುಪಡಿಸಿ ಅನೇಕ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಜೆಡಿಯು ನಾಯಕರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅರುಣಾಚಲ ಪ್ರದೇಶ | ‘ಒಂದಿಂಚು ಭೂಮಿ ಬಿಡೆವು’ ಎಂದ ಅಮಿತ್ ಶಾ; ‘ಸಾರ್ವಭೌಮತೆಗೆ ಧಕ್ಕೆ’ ಎಂದು ಆಕ್ಷೇಪಿಸಿದ ಚೀನಾ

“ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಇದು ನಿತೀಶ್‌ ಅವರ ಬಹುನಿರೀಕ್ಷಿತ ಪ್ರವಾಸ. ಒಗ್ಗಟ್ಟಿನ ಹೋರಾಟದತ್ತ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಹೆಜ್ಜೆ ಇರಿಸಿರುವುದು ಸಂತಸ ತಂದಿದೆ” ಎಂದು ಜೆಡಿಯು ಹಿರಿಯ ನಾಯಕ ಮತ್ತು ರಾಜ್ಯಸಭಾ ಮಾಜಿ ಸಂಸದ ಕೆ ಸಿ ತ್ಯಾಗಿ ಹೇಳಿದ್ದಾರೆ.

ಪ್ರತಿಪಕ್ಷಗಳ ಒಗ್ಗೂಡಿಸುವಿಕೆಗೆ ನಿತೀಶ್‌ ಕುಮಾರ್‌ ಅವರಿಗೆ ಕರೆ ಮಾಡುವುದಾಗಿ ಕಳೆದ ವಾರ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...