ರಾಹುಲ್ ಗಾಂಧಿ ‘ನಂ. 1 ಭಯೋತ್ಪಾದಕ’ ಹೇಳಿಕೆ; ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ ದೂರು ದಾಖಲು

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರನ್ನು ದೇಶದ ‘ನಂಬರ್ 1 ಭಯೋತ್ಪಾದಕ’ ಎಂದು ಕರೆದ ಆರೋಪದ ಮೇಲೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಕಾಂಗ್ರೆಸ್ ಮುಖಂಡ ಅಜಯ್ ಮಕೆನ್ ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿ (ಎಐಎಂಸಿಸಿ) ಮುಖ್ಯಸ್ಥೆ, ಕಾಂಗ್ರೆಸ್ ಖಜಾಂಚಿ ಅಲ್ಕಾ ಲಂಬಾ ಅವರೂ ಕೂಡಾ ಕೇಂದ್ರ ಸಚಿವ ರವನೀತ್ ಮತ್ತು ಇತರ ಮೂವರು ರಾಜಕೀಯ ನಾಯಕರ ವಿರುದ್ಧ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರವನೀತ್ ಸಿಂಗ್ ಹೊರತುಪಡಿಸಿ ಕಾಂಗ್ರೆಸ್ ಮುಖಂಡರ ದೂರಿನಲ್ಲಿ ಬಿಜೆಪಿ ನಾಯಕ ತರ್ವಿಂದರ್ ಸಿಂಗ್ ಮರ್ವಾ, ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಮತ್ತು ಉತ್ತರ ಪ್ರದೇಶದ ಸಚಿವ ರಘುರಾಜ್ ಸಿಂಗ್ ಅವರ ಹೆಸರೂ ಇದೆ. ದೂರಿನ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೂ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ ಬಹುಮಾನ: ಶಿವಸೇನಾ ನಾಯಕ

“ಸೆಪ್ಟೆಂಬರ್ 15ರಂದು ರವನೀತ್ ಬಿಟ್ಟು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ರಾಹುಲ್ ಗಾಂಧಿ ಅವರನ್ನು ‘ದೇಶದ ನಂಬರ್ ಒನ್ ಭಯೋತ್ಪಾದಕ’ ಎಂದು ಕರೆದಿದ್ದಾರೆ. ಹಿಂಸಾಚಾರ ಪ್ರಚೋದಿಸುವ ಮತ್ತು ಶಾಂತಿ ಭಂಗ ಮಾಡುವ ಉದ್ದೇಶದಿಂದ ರವನೀತ್ ಅವರು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿ ವಿರುದ್ಧ ದ್ವೇಷ ಮತ್ತು ಆಕ್ರೋಶವನ್ನು ಕೆರಳಿಸಲು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಟಿವಿ ಚಾನೆಲ್‌ಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ” ಎಂದು ಅಜಯ್ ಮಕೆನ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಸೆಪ್ಟೆಂಬರ್ 11ರಂದು ಕಾರ್ಯಕ್ರಮವೊಂದರಲ್ಲಿ ಬಿಜೆಪಿಯ ಮತ್ತೋರ್ವ ನಾಯಕ ತರ್ವಿಂದರ್ ಸಿಂಗ್ ಮರ್ವಾ ಅವರು ರಾಹುಲ್ ಗಾಂಧಿ ಅವರಿಗೆ ಸಾರ್ವಜನಿಕವಾಗಿ ಹತ್ಯೆ ಬೆದರಿಕೆ ಹಾಕಿದ್ದಾರೆ ಎಂದು ಅಜಯ್ ಮಕೆನ್ ಆರೋಪಿಸಿದ್ದಾರೆ.

ತರ್ವಿಂದರ್ ಸಿಂಗ್ ಮರ್ವಾ ತನ್ನ ಭಾಷಣದಲ್ಲಿ “ನೀವು ಉತ್ತಮವಾಗಿ ವರ್ತನೆ ಮಾಡಿ, ಇಲ್ಲವಾದರೆ ನಿಮ್ಮ ಅಜ್ಜಿಯಂತೆಯೇ (ಇಂದಿರಾ ಗಾಂಧಿ) ನಿಮ್ಮ ಗತಿಯಾಗುತ್ತದೆ” ಎಂದು ಹೇಳಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಅಂಗರಕ್ಷಕರಾದ ಸತ್ವಂತ್ ಸಿಂಗ್ ಮತ್ತು ಬಿಯಾಂತ್ ಸಿಂಗ್ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಇನ್ನು ಸೆಪ್ಟೆಂಬರ್ 16ರಂದು ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಅವರು ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಉತ್ತರ ಪ್ರದೇಶದ ಸಚಿವ ರಘುರಾಜ್ ಸಿಂಗ್ ಕೂಡ ರಾಹುಲ್ ಗಾಂಧಿಯನ್ನು ‘ಭಾರತದ ನಂಬರ್ ಒನ್ ಭಯೋತ್ಪಾದಕ’ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...