ದೃಢ ಪುರಾವೆ ಲಭ್ಯವಾಗುವವರೆಗೂ ಅದಾನಿ ಗ್ರೀನ್ ವಿರುದ್ಧ ಯಾವುದೇ ಕ್ರಮವಿಲ್ಲ: ಚಂದ್ರಬಾಬು ನಾಯ್ಡು

Date:

ಲಂಚದ ಆರೋಪದ ಮೇಲೆ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (ಎಜಿಇಎಲ್) ವಿರುದ್ಧ ದೃಢ ಪುರಾವೆ ಲಭ್ಯವಾಗುವವರೆಗೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಗುರುವಾರ ಹೇಳಿದ್ದಾರೆ.

ಅದಾನಿ ಗ್ರೂಪ್ ವಿರುದ್ಧ ಈಗಾಗಲೇ ಹಿಂಡನ್‌ಬರ್ಗ್ ಸಂಸ್ಥೆ ಷೇರು ಮಾರುಕಟ್ಟೆಯಲ್ಲಿ ವಂಚನೆ ಮಾಡಿರುವ ಆರೋಪಗಳನ್ನು ಮಾಡಿದೆ. ಇದಾದ ಬೆನ್ನಲ್ಲೇ ಅದಾನಿ ಗ್ರೀನ್ ವಿರುದ್ಧ ಯುನೈಟೆಡ್ ಸ್ಟೇಟ್ಸ್ ನ್ಯಾಯಾಲಯ ದೋಷಾರೋಪಣೆ ಮಾಡಿದೆ.

ಇದನ್ನು ಓದಿದ್ದೀರಾ? ₹371 ಕೋಟಿ ಭಾರೀ ಹಗರಣ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಇಡಿಯಿಂದ ಕ್ಲೀನ್ ಚಿಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕನ್ ಹೂಡಿಕೆದಾರರನ್ನು ವಂಚಿಸಿದ, ಅಧಿಕಾರಿಗಳಿಗೆ ಲಂಚ ನೀಡಿದ, ಫೆಡರಲ್ ಸೆಕ್ಯುರಿಟೀಸ್ ಕಾನೂನುಗಳನ್ನು ಉಲ್ಲಂಘಿಸಿದ ದೋಷಾರೋಪಣೆಯನ್ನು ಅದಾನಿ ಗ್ರೀನ್ ಮೇಲೆ ಮಾಡಲಾಗಿದೆ.

ಇದಾದ ಬೆನ್ನಲ್ಲೇ ತೆಲಂಗಾಣ ಸರ್ಕಾರವು ಅದಾನಿ ಗ್ರೀನ್ ಹೂಡಿಕೆಯನ್ನು ನಿರಾಕರಿಸಿದೆ. ಆದರೆ ಎನ್‌ಡಿಎ ಕೂಟದಲ್ಲಿರುವ ಆಂಧ್ರಪ್ರದೇಶದ ಟಿಡಿಪಿ ಸರ್ಕಾರ ಮಾತ್ರ ಅದಾನಿ ಸಂಸ್ಥೆಯಿಂದ ದೂರವಾಗುತ್ತಿಲ್ಲ. ಈ ಮೂಲಕ ವಿಪಕ್ಷಗಳ ವಾಗ್ದಾಳಿಗೆ ಒಳಗಾಗಿದೆ.

ಇದನ್ನು ಓದಿದ್ದೀರಾ? ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ತೆಲಂಗಾಣ ಸರ್ಕಾರ

ಅದಾನಿ ಸಂಸ್ಥೆ ಬಗ್ಗೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಚೇರಿಯಲ್ಲಿ ಮಾತನಾಡಿದ ನಾಯ್ಡು “ಸರಿಯಾದ ಪುರಾವೆ ಲಭ್ಯವಾಗದೆ ನಾವು ಒಪ್ಪಂದಗಳಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ದೃಢ ಪುರಾವೆ ಸಿಗುವವರೆಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ನಮಗೆ ಹೆಚ್ಚಿನ ಪುರಾವೆ ಬೇಕು” ಎಂದು ಹೇಳಿಕೊಂಡಿದ್ದಾರೆ.

“ನಾವು ಯುಎಸ್ಎಯಲ್ಲಿ ನಡೆಯುತ್ತಿರುವ ಪ್ರಕರಣದ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ದೃಢವಾದ ಪುರಾವೆ ದೊರೆತರೆ ಮಾತ್ರ ಕ್ರಮಕೈಗೊಳ್ಳಲಾಗುವುದು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...