ಉತ್ತರ ಪ್ರದೇಶ | ಮದ್ಯ ಕೊಡಿಸದ ಕಾರಣಕ್ಕೆ ದಲಿತ ಯುವಕನ ಕೊಲೆ

Date:

ಮಗನ ಹುಟ್ಟುಹಬ್ಬದ ಪ್ರಯುಕ್ತ ಮದ್ಯ ಕೊಡಿಸದ ಕಾರಣಕ್ಕೆ ದಲಿತ ಯುವಕನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಜಿಲ್ಲೆಯ ಫರಿದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸಚಿನ್(25) ಮೃತರು. ಜುಲೈ 11 ರಂದು ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸಚಿನ್ ಬುಧವಾರ(ಆಗಸ್ಟ್ 2) ಕೊನೆಯುಸಿರೆಳೆದಿದ್ದಾರೆ.           

ಜುಲೈ 11ರಂದು ವಿಶಾಲ್ ಹಾಗೂ ಆತನ ಸ್ನೇಹಿತರು ಕಬ್ಬಿಣದ ರಾಡ್‌ಗಳನ್ನು ಹಿಡಿದು ಸಚಿನ್‌ ಅವರ ಮನೆಗೆ ನುಗ್ಗಿದ್ದರು. ಮಗನ ಹುಟ್ಟು ಹಬ್ಬದ ಪ್ರಯುಕ್ತ ಮದ್ಯದ ಪಾರ್ಟಿ ಕೊಡಿಸಬೇಕು ಎಂದು ವಿಶಾಲ್‌ ಹಠ ಹಿಡಿದಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಹಂಕಾರ, ಅತಿರೇಕ ಹೆಚ್ಚಾದಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ: ಪ್ರಧಾನಿ ವಿರುದ್ಧ ಜೈರಾಮ್ ರಮೇಶ್ ಕಿಡಿ

ಹಣಕಾಸಿನ ಸಮಸ್ಯೆಯಿಂದ ಸಚಿನ್‌ ಮದ್ಯದ ಪಾರ್ಟಿ ಕೊಡಿಸಲು ನಿರಾಕರಿಸಿದ್ದರು. ಆದರೆ ವಿಶಾಲ್‌ ಮತ್ತು ಆತನ ಸ್ನೇಹಿತರು ಮದ್ಯ ಕೊಡಿಸಲೇಬೇಕು ಎಂದು ಬೆದರಿಸಿದ್ದರು. ಅದನ್ನು ನಿರಾಕರಿಸಿದಾಗ, ಸಚಿನ್ ಅವರನ್ನು ಮನೆಯಿಂದ ಹೊರಗೆ ಕರೆತಂದು ಕಂಬಕ್ಕೆ ಕಟ್ಟಿ ರಾಡ್‌ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಸಚಿನ್‌ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಚಿನ್‌ ಆಗಸ್ಟ್‌ 2 ರಂದು ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಸಚಿನ್ ಅವರ ತಾಯಿ ನೀಡಿದ ದೂರಿನ ಅನ್ವಯ ಅದೇ ಊರಿನ ವಿಶಾಲ್, ಅಕ್ಕು, ಆಕಾಶ್, ಕಲ್ಲು ಎಂಬವರ ಮೇಲೆ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿದೆ. ಸದ್ಯ ಮೂವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ವಿಶಾಲ್‌ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...