ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಪುರಾವೆಯಿಲ್ಲ: ಧರ್ಮೇಂದ್ರ ಪ್ರಧಾನ್

Date:

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಯಾವುದೇ ಪುರಾವೆಯಿಲ್ಲ. ಎನ್‌ಟಿಎ ಮೇಲೆ ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳು ಪತ್ತೆಯಾಗಿಲ್ಲ.ಇದೊಂದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆ” ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ನಾವು ಈ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಯಾವುದೇ ವಿದ್ಯಾರ್ಥಿಗೂ ಅನಾನುಕೂಲವಾಗದಂತೆ ನಾವು ಖಚಿತಪಡಿಸುತ್ತೇವೆ” ಎಂದು ಧರ್ಮೇಂದ್ರ ಪ್ರಧಾನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಈ ವರ್ಷದ ನೀಟ್‌ ಯುಜಿ ಪ್ರವೇಶ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪಡೆದುಕೊಂಡಿದ್ದ ಗ್ರೇಸ್‌ ಅಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಇಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ನೀಟ್ ಫಲಿತಾಂಶ ವಿವಾದ: 1563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಸುಪ್ರೀಂಗೆ ತಿಳಿಸಿದ ಕೇಂದ್ರ

ಪರೀಕ್ಷೆ ಆರಂಭಿಸಲು ವಿಳಂಬವಾದ ಕಾರಣ ಅದಕ್ಕೆ ಪ್ರತಿಯಾಗಿ ನಿರ್ದಿಷ್ಟ ಕೇಂದ್ರಗಳ ವಿದ್ಯಾರ್ಥಿಗಳಿಗೆ ಗ್ರೇಸ್‌ ಅಂಕ ನೀಡಲಾಗಿತ್ತು. ಇಂತಹ ಕೇಂದ್ರಗಳಲ್ಲಿ ಗ್ರೇಸ್‌ ಅಂಕವನ್ನು ರದ್ದುಗೊಳಿಸಲಾಗಿದ್ದು, ಅವರಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆ ನೀಡಲಾಗಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜೂನ್‌ 23ರಂದು ಮರು ಪರೀಕ್ಷೆಯನ್ನು ಎನ್‌ಟಿಎ ಕೈಗೊಳ್ಳುವ ಸಂಭವವಿರುವ ಸಲ್ಲಿಕೆಯನ್ನು ಕೋರ್ಟ್‌ ದಾಖಲಿಸಿಕೊಂಡಿತು. ಇದರ ಫಲಿತಾಂಶವನ್ನು ಜೂನ್‌ 30 ರಂದು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಮೇ 5 ರಂದು ನಡೆದ ಹಮ್ಮಿಕೊಳ್ಳಲಾಗಿದ್ದ ನೀಟ್‌ ಪರೀಕ್ಷೆಯಲ್ಲಿ ದೇಶಾದ್ಯಂತ 571 ಕೇಂದ್ರಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಎನ್‌ಟಿಎ ಇತಿಹಾಸದಲ್ಲಿಯೆ ಮೊದಲ ಬಾರಿಗೆ 67ಕ್ಕೂ ಹೆಚ್ಚು ವಿದ್ಯಾರ್ಥಿಗಳು 720 ಕ್ಕೆ 720 ಅಂಕ ಪಡೆದುಕೊಂಡಿದ್ದರು. ಈ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹರಿಯಾಣದ ಫರಿದಾಬಾದ್‌ ಪರೀಕ್ಷಾ ಕೇಂದ್ರದಲ್ಲಿ ಬರೆದ ವಿದ್ಯಾರ್ಥಿಗಳಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...