ಸ್ವಾತಂತ್ರ್ಯದ ದಿನವೇ ಮಾಂಸದ ಅಂಗಡಿಗಳಿಗೆ ಇಲ್ಲ ಸ್ವಾತಂತ್ರ್ಯ!

Date:

ಆಗಸ್ಟ್‌ 15ರಂದು ಭಾರತವು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ದಿನ ಆಚರಣೆಗೆ ಸಿದ್ದವಾಗುತ್ತಿರುವ ದೇಶಾದ್ಯಂತ ಸಂಭ್ರಮದ ವಾತಾವರಣೆ ಕಂಡುಬರುತ್ತಿದೆ. ಆದರೆ, ಹಲವೆಡೆ ಮಾಂಸದ ಅಂಗಡಿಗಳ ಸ್ವಾತಂತ್ರ್ಯವನ್ನು ಬಲವಂತವಾಗಿ ಕಸಿದುಕೊಳ್ಳಲಾಗಿದೆ. ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಕೆಲವು ನಗರಗಳಲ್ಲಿ ಆಗಸ್ಟ್‌ 15ರಂದು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ, ಕಲ್ಯಾಣ್-ಡೊಂಬಿವ್ಲಿ, ಮಾಲೆಗಾಂವ್ ಹಾಗೂ ನಾಗ್ಪುರದಲ್ಲಿ ಅಲ್ಲಿನ ಪಾಲಿಕೆಗಳು ಆಗಸ್ಟ್‌ 15ರಂದು ಮಾಂಸ ಮಾರಾಟವನ್ನು ನಿಷೇಧಿಸಿವೆ. ಅಂತೆಯೇ, ತೆಲಂಗಾಣದ ಹೈದರಾಬಾದ್‌ನಲ್ಲಿಯೂ ಪಾಲಿಕೆಯು ಮಾಂಸದ ಅಂಗಡಿಗಳನ್ನು ತೆರೆಯದಂತೆ ಆದೇಶ ಹೊರಡಿಸಿದೆ. ಪಾಲಿಕೆಗಳ ಕ್ರಮವನ್ನು ಹಲವರು ಖಂಡಿಸಿದ್ದಾರೆ. ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಲಿಕೆಗಳ ಕ್ರಮವನ್ನು ಖಂಡಿಸಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಹೈದರಾಬಾದ್ ಸಂಸದ ಅಸದುದ್ದೀನ್ ಓವೈಸಿ, “ಭಾರತದಾದ್ಯಂತ ಅನೇಕ ಪುರಸಭೆಗಳು ಮತ್ತು ಪಾಲಿಕೆಗಳು ಆಗಸ್ಟ್ 15ರಂದು ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಬೇಕೆಂದು ಆದೇಶಿಸಿವೆ. ದುರದೃಷ್ಟವಶಾತ್, ಹೈದರಾಬಾದ್‌ನಲ್ಲಿಯೂ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಕೂಡ ಸಹ ಇದೇ ರೀತಿಯ ಆದೇಶವನ್ನು ಹೊರಡಿಸಿದೆ. ಇದು ನಿರ್ದಯ ಮತ್ತು ಸಂವಿಧಾನಬಾಹಿರ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಂಸ ತಿನ್ನುವುದಕ್ಕೂ ಮತ್ತು ಸ್ವಾತಂತ್ರ್ಯ ದಿನವನ್ನು ಆಚರಿಸುವುದಕ್ಕೂ ಸಂಬಂಧವೇನು? ತೆಲಂಗಾಣದ 99% ಜನರು ಮಾಂಸ ತಿನ್ನುತ್ತಾರೆ. ಈ ಮಾಂಸ ನಿಷೇಧಗಳು ಜನರ ಸ್ವಾತಂತ್ರ್ಯ, ಪ್ರೈವೆಸಿ, ಜೀವನೋಪಾಯ, ಸಂಸ್ಕೃತಿ, ಪೋಷಣೆ ಮತ್ತು ಧಾರ್ಮಿಕ ಹಕ್ಕನ್ನು ಉಲ್ಲಂಘಿಸುತ್ತವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಆಡಳಿತದಲ್ಲಿ ಹಿಂದು ಹಬ್ಬಗಳ ಸಮಯದಲ್ಲಿ ಮಾಂಸ ನಿಷೇಧಿಸುವುದು ಸಾಮಾನ್ಯವಾಗಿದೆ. ದೇಶದಲ್ಲಿ ಹೆಚ್ಚಿನವರು ಪ್ರಧಾನವಾಗಿ ಮಾಂಸಾಹಾರವನ್ನು ತಿನ್ನುತ್ತಾರೆ. ಆದರೆ, ಮಾಂಸ ಮಾರಾಟವನ್ನು ನಿರಂತರವಾಗಿ ನಿಷೇಧಿಸಲಾಗುತ್ತಿದೆ. ಇಂತಹ ಕ್ರಮಗಳು ಸ್ಥಳೀಯ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ಹಲವರು ಟೀಕಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರದ ಭಾಗವೇ ಆಗಿರುವ ಎನ್‌ಸಿಪಿ (ಅಜಿತ್ ಬಣ) ಮಾಂಸಾಹಾರ ಮಾರಾಟ ನಿಷೇಧವನ್ನು ಪ್ರಶ್ನಿಸಿದೆ. ಆದರೆ, ಬಿಜೆಪಿ ನಾಯಕರು ಸ್ವಾತಂತ್ರ್ಯ ದಿನಾಚರಣೆ ಮತ್ತು ಮಹಾವೀರ ಜಯಂತಿಯಂತಹ ಸಂದರ್ಭಗಳಲ್ಲಿ ಮಾಂಸ ಮಾರಾಟ ನಿಷೇಧವನ್ನು ವಿಧಿಸುವ ಅಧಿಕಾರಿ ಪುರಸಭೆಗಳಿಗೆ ಇದೆ ಎಂಧು ಸಮರ್ಥಿಸಿಕೊಂಡಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್, “ಆಷಾಢ ಏಕಾದಶಿ ಅಥವಾ ಮಹಾವೀರ ಜಯಂತಿಯಂದು ಮಾಂಸ ನಿಷೇಧ ಮಾಡಿದ್ದರೆ ಈ ನಿಷೇಧವನ್ನು ಅರ್ಥಮಾಡಿಕೊಳ್ಳಬಹುದಿತ್ತು. ಆದರೆ ಅಂತಹ ಸಂದರ್ಭವಿಲ್ಲದಿದ್ದಾಗ, ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಏಕೆ ಒತ್ತಾಯಿಸಬೇಕು”ಎಂದು ಪ್ರಶ್ನಿಸಿದ್ದಾರೆ.

ಶಿವಸೇನಾ (ಉದ್ಧವ್ ಬಣ) ಶಾಸಕ ಆದಿತ್ಯ ಠಾಕ್ರೆ, “ಸ್ವಾತಂತ್ರ್ಯ ದಿನದಂದು ನಾವು ಏನು ತಿನ್ನುತ್ತೇವೆ ಎಂಬುದು ನಮ್ಮ ಹಕ್ಕು. ನಮ್ಮ ಸ್ವಾತಂತ್ರ್ಯ. ನಾವು ಸಸ್ಯಾಹಾರಿ ಅಥವಾ ಮಾಂಸಾಹಾರಿ ತಿನ್ನಬೇಕೆ ಎಂಬುದನ್ನು ನಮಗೆ ಹೇಳಲು ಅವರಿಗೆ ಅಧಿಕಾರವಿಲ್ಲ. ನಾವು ಖಂಡಿತವಾಗಿಯೂ ಮಾಂಸಾಹಾರಿ ತಿನ್ನುತ್ತೇವೆ. ನಾವು ಅದನ್ನು ನಮ್ಮ ಮನೆಯಲ್ಲಿ ತಿನ್ನುತ್ತೇವೆ. ನಮ್ಮ ಮನೆಯಲ್ಲಿ ನವರಾತ್ರಿಯ ಸಮಯದಲ್ಲೂ ಪ್ರಸಾದದಲ್ಲಿ ಸೀಗಡಿ, ಮೀನು ಇರುತ್ತದೆ. ಇದು ನಮ್ಮ ಸಂಪ್ರದಾಯ… ಇದು ಧರ್ಮದ ವಿಷಯವಲ್ಲ ಮತ್ತು ಇದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಲ್ಲ…” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...